ಶಿರೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲೇಬೇಕು ಎಂದು ದೃಢ ಸಂಕಲ್ಪ ಮಾಡಿರುವ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಈಗಾಗಲೇ 200 ಕ್ಕೂ ಅಧಿಕ ಬೂತ್ ಗಳಲ್ಲಿ ಸಂಚಾರ ಮಾಡಿದ್ದಾರೆ.ರವಿವಾರ ಬೆಳಗ್ಗೆಯಿಂದ ಸಂಜೆಯವರೆಗೂ ಶಿರೂರು ಕರಾವಳಿ ವ್ಯಾಪ್ತಿಯ 15 ಬೂತ್ ಗಳಲ್ಲಿ ಸಂಚರಿಸಿ ಕಾರ್ಯಕರ್ತರು ಹಾಗೂ ಮತದಾರರ ಸಭೆ ನಡೆಸಿ ಚುನಾವಣೆ ಪ್ರಚಾರ ಪ್ರಕ್ರಿಯೆಗೆ ವೇಗ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆ,ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ಮಾಜಿ ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ,ಶಿರೂರು ಶಕ್ತಿ ಕೇಂದ್ರದ ಜಗನ್ನಾಥ ಮೊಗವೀರ, ಗ್ರಾ.ಪಂ ಸದಸ್ಯ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಬಾಬು ಮೊಗೇರ್ ಅಳ್ವೆಗದ್ದೆ,ಹಿರಿಯರಾದ ಮಂಜು ಬಿಲ್ಲವ,ಮಂಗಳು ಬಿಲ್ಲವ ಕರಾವಳಿ,ತುಳಸಿದಾಸ್ ಮೊಗೇರ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.