ಬೈಂದೂರು; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು (ಫ್ರೌಢಶಾಲಾ ವಿಭಾಗ)ಬೈಂದೂರು ಇದರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಫ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಖೋ -ಖೋ ಪಂದ್ಯಾಟ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.

ಉದ್ಯಮಿ ಜಗನ್ನಾಥ ಶೆಟ್ಟಿ ನಾಕಟ್ಟೆ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟವನ್ನು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಕ್ರೀಡೆಗಳು ಶೈಕ್ಷಣಿಕ ವ್ಯಾಪ್ತಿಯ ಇನ್ನೊಂದು ಭಾಗವಾಗಿದೆ.ಜಾಗತಿಕ ಮಟ್ಟದಲ್ಲಿ ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ವಿಪುಲ ಅವಕಾಶಗಳಿವೆ.ಪ್ರತಿಭಾವಂತರಿಗೆ ಉತ್ತಮ ಅವಕಾಶಗಳಿವೆ.ಕಾಲೇಜು ದಿನಗಳಲ್ಲಿ ಇರುವ ಆಸಕ್ತಿ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ.ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವುದು ಬಹುಮುಖ್ಯ ಎಂದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಗಣಪ ಜಿ.ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಸದಸ್ಯ ಬಾಬು ಶೆಟ್ಟಿ,ಸುರೇಶ್ ಬಟ್ವಾಡಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ,ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ,ಸ.ಪ.ಪೂ ಕಾಲೇಜಿನ ಪ್ರಾಂಶುಪಾಲ ಎಮ್.ಪಿ ನಾಯ್ಕ,ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಭಾಗೀರಥಿ,ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ,ಕಾರ್ಯದರ್ಶಿ ಗಣಪತಿ ಹೋಬಳಿದಾರ್,ಬೈಂದೂರು ಸ.ಪ.ಪೂ ಕಾಲೇಜಿನ ಫ್ರೌಢಶಾಲಾ ವಿಭಾಗದ ಕಾರ್ಯಾಧ್ಯಕ್ಷ ಸದಾಶಿವ ಡಿ.ಪಡುವರಿ,ತಿರುಮಲೇಶ್ವರ ಭಟ್,ಸದಾನಂದ ಶೆಟ್ಟಿ,ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಶ್ರೀಪತಿ,ದಿನಕರ ಪಟವಾಲ್ ಪಡುವರಿ,ಶ್ರೀನಿವಾಸ ಶೆಟ್ಟಿ,ರೋನಿ ನಜ್ರತ್,ಬೈಂದೂರು ಮಾದರಿ ಶಾಲೆಯ ಮುಖ್ಯ ಶಿಕ್ಷಕ ಜನಾರ್ಧನ ದೇವಾಡಿಗ,ಸುಧಾಕರ ಪಿ.ಬೈಂದೂರು,ಸತ್ಯನಾರಾಯಣ ಜಿ.ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಮಿ ಜಗನ್ನಾಥ ಶೆಟ್ಟಿ ನಾಕಟ್ಟೆ ,ಅರಣ್ಯ ಸಂಚಾರ ದಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ ಹಾಗೂ ಉದ್ಯಮಿ ಜಯಾನಂದ ಹೋಬಳಿದಾರ್ ರವರನ್ನು ಸಮ್ಮಾನಿಸಲಾಯಿತು.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕ್ಷಕ ರಘುನಾಥ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಬೈಂದೂರು ಸ.ಪ.ಪೂ ಕಾಲೇಜಿನ ಸಹಶಿಕ್ಷಕರಾದ ರವೀಂದ್ರ ಪಿ ಹಾಗೂ ಧತ್ತಾತ್ರೇಯ ಭಟ್ ಕಾರ್ಯಕ್ರಮ ನಿರ್ವಹಿಸಿದರುಕಾಲೇಜಿನ ಉಪಪ್ರಾಂಶುಪಾಲ ಪದ್ಮನಾಭ ಸ್ವಾಗತಿಸಿದರು.ಸಹಶಿಕ್ಷಕಿ ಚಿತ್ರಾ ಶೆಣೈ ವಂದಿಸಿದರು.

ವರದಿ/ಚಿತ್ರ: ಗಿರೀಶ್ ಶಿರೂರು

 

Leave a Reply

Your email address will not be published.

12 + five =