ಬೈಂದೂರು: ಕರ್ನಾಟಕದಲ್ಲಿ ಬಿಜೆಪಿ ಪರ ಅತ್ಯುತ್ತಮ ಜನ ಬೆಂಬಲವಿದೆ.ದೇಶದಲ್ಲಿ ನಾಲ್ಕು ನೂರಕ್ಕೂ ಅಧಿಕ  ಸ್ಥಾನ ಬಿಜೆಪಿ ಗಳಿಸಲಿದೆ.ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಈ ದೇಶವನ್ನು ಜಾಗತಿಕ ಮಟ್ಟದಲ್ಲಿ ಸದೃಡಗೊಳಿಸಿದೆ.ಕರ್ನಾಟಕದ 28 ಲೋಕಸಭಾ  ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ.ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು ಅವರು ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಬೃಹತ್ ರೋಡ್ ಶೋ ಚಾಲನೆ ನೀಡಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂದು ಎಲ್ಲರೂ ಬಯಸಿದ್ದಾರೆ. ಹೀಗಾಗಿ ನೂರಕ್ಕೆ ನೂರು ರಾಘವೇಂದ್ರ ಅವರು ಅತ್ಯಧಿಕ ಅಂತರದಲ್ಲಿ ಗೆಲ್ಲಿದ್ದಾರೆ ಎಂದರು.

ಕೊಲ್ಲೂರಿಗೆ ಆಗಮಿಸಲಿದ್ದಾರೆ ಮೋದಿ,ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿದೆ ಬೈಂದೂರು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮಾತನಾಡಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ ರಾಘವೇಂದ್ರ 3 ಲಕ್ಷಕ್ಕೂ ಅಧಿಕ ಅಂತರದಲ್ಲಿ ವಿಜಯಶಾಲಿಯಾಗಲಿದ್ದಾರೆ. ಕಾಂಗ್ರೆಸ್ ನವರು  ಹತಾಶೆಯಿಂದ ರಾಹುಲ್‌ಗಾಂಧಿ ಯವರನ್ನು ಶಿವಮೊಗ್ಗಕ್ಕೆ ಕರೆಸಿದ್ದಾರೆ. ಸಮಾರಂಭದಲ್ಲಿ ಏನೇನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಮತ್ತು ಕಾಂಗ್ರೆಸ್ ಎಷ್ಟು ಅಸಂಘಟಿತವಾಗಿದೆ ಎಂಬುದು ತಿಳಿಯುತ್ತದೆ. ಮತದಾರರು ಬಿಜೆಪಿ ಜತೆಗೆ ಇದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಈಗಾಗಲೇ ಸ್ಪಷ್ಟತೆ ನೀಡಿದ್ದಾರೆ ಎಂದರು.ದಕ್ಷಿಣ ಭಾರತದಲ್ಲಿ ಟೆಂಪಲ್ ಕಾರೀಡಾರ್ ಗೆ ಆದ್ಯತೆ ನೀಡುತ್ತಿದ್ದೇವೆ.ಕಾಶೀ-ವಾರಣಸಿ, ಉಜ್ಜನಿ, ಅಯೋಧ್ಯೆ ಕಾರೀಡಾರ್ ಆಗಿದೆ. ಅದೇ ರೀತಿಯಲ್ಲಿ ತಮಿಳುನಾಡಿನಲ್ಲಿ ತಿರುವಣ್ಣಾಮಲೈ ಕಾರಿಡಾರ್ ಮಾಡುವುದಾಗಿ ನಾವು ಹೇಳಿದ್ದೇವೆ. ಕರ್ನಾಟಕದಲ್ಲಿ ಮೂಕಾಂಬಿಕಾ ಕಾರೀಡಾರ್ ಮಾಡುವ ಸಮಯ ಬಂದಿದೆ. ಪ್ರಧಾನಿ ನರೇಂದ್ರ  ಮೋದಿಯವರನ್ನು ಇಲ್ಲಿಗೆ  ಕರೆದುಕೊಂಡು ಬಂದು, ದೇವಿಯ ದರ್ಶನ ಪಡೆಯಲಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕಾ ಕಾರೀಡಾರ್ ಆಗಿಯೇ ಆಗಲಿದೆ. ಈ ಬಗ್ಗೆ ಸ್ಪಷ್ಟ ರೂಪುರೇಷೆ ನಮ್ಮ ಬಳಿಯಿದೆ. ಬೈಂದೂರಿನಿಂದಲೇ ಒಂದು ಲಕ್ಷಕ್ಕೂ ಅಧಿಕ ಅಂತರ ನೀಡುವ ವಿಶ್ವಾಸ ವ್ಯಕ್ತವಾಗಿದೆ.ಮೂಕಾಂಬಿಕಾ ಕಾರೀಡಾರ್ ಆದರೆ ಬೈಂದೂರು ಮತ್ತು ಕೊಲ್ಲೂರು ಕ್ಷೇತ್ರ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲಿದೆ.ಅಭಿವೃದ್ದಿ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದರು.

ಎಲ್ಲೆಡೆ ಬಿರುಸಿನ ಪ್ರಚಾರ; ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ನಿಂದ ಯಾರೇ ಪ್ರಚಾರ ಮಾಡಲಿ. ನಾವಂತೂ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅಷ್ಟೇ ಪರಿಣಾಮಕಾರಿಯಾಗಿ ಪ್ರಚಾರ ಪ್ರಕ್ರಿಯೆ ನಡೆಸುತ್ತಿದ್ದೇವೆ. ಬೈಂದೂರು ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶ ಮತ್ತು ಸ್ವಾಭಿಮಾನದಿಂದ ಇಲ್ಲಿನ ಜನರು ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಹೇಳಿದರು.

ಬೈಂದೂರಿನಲ್ಲಿ ಬೃಹತ್ ರೋಡ್ ಶೋ; ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅಣ್ಣಾಮಲೈ ಅವರ ನೇತೃತ್ವದಲ್ಲಿ ಬೃಹತ್ ರೋಡ್ ಶೋ ಬೈಂದೂರಿನಿಂದ ಆರಂಭಗೊಂಡು.ಉಪ್ಪುಂದ ಭಾಗದಲ್ಲಿ ಸಂಚರಿಸಿದೆ.

ಈ ಸಂದರ್ಭದಲ್ಲಿ ಬೈಂದೂರು  ಶಾಸಕ ಗುರುರಾಜ ಗಂಟಿಹೊಳೆ,ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ,ಚಿತ್ರನಟಿ ತಾರಾ, ಬ್ರಿಜೇಶ್ ಚೌಟ,ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ವೆಂಕಟೇಶ ಕಿಣಿ,ಮಹೇಂದ್ರ ಪೂಜಾರಿ ಮೊದಲಾದವರು ಹಾಜರಿದ್ದರು.ಬೈಕ್ ರ್‍ಯಾಲಿಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.

 

 

Leave a Reply

Your email address will not be published. Required fields are marked *

five × two =

You missed