ಶಿರೂರು: ಕರ್ನಾಟಕ ರಾಜ್ಯದ ಮೀನುಗಾರಿಕಾ,ಒಳನಾಡು ಜಲಸಾರಿಗೆ ಮತ್ತು ಬಂದರು ಸಚಿವ ಮಂಕಾಳ ಎಸ್.ವೈದ್ಯ ಶಿರೂರು,ಅಳ್ವೆಗದ್ದೆ ,ಕಳಿಹಿತ್ಲು ಮುಂತಾದ ಕಡೆಗಳಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಚುನಾವಣಾ ಪ್ರಚಾರ ನಡೆಸಿದರು.ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಪಕ್ಷ ಅತ್ಯುತ್ತಮ ಆಡಳಿತ ನೀಡಿದೆ.ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ.ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಕಾಂಗ್ರೆಸ್ ಮುಖಂಡ ಎಸ್.ರಾಜು ಪೂಜಾರಿ,ಮಾಜಿ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ,ಮಾಜಿ ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ,ಶಂಕರ ಪೂಜಾರಿ ಹಾಜರಿದ್ದರು.