ಶಿರೂರು: ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಢ ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಎಸ್.ಎಸ್.ಎಲ್.ಸಿ ಉತ್ತಿರ್ಣ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಕುರಿತು ಕಾರಣರಾದವರನ್ನು ಬಂಧಿಸಬೇಕು ಮತ್ತು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಸಾರ್ವಜನಿಕರು ಮತ್ತು ಕುಟುಂಬಸ್ಥರು ಬೈಂದೂರು ಆರಕ್ಷಕ ಠಾಣೆ ಎದುರು ಜಮಾಯಿಸಿದರು ಹಾಗೂ ನ್ಯಾಯ ದೊರಕುವ ವರೆಗೂ ಶವ ಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ನೋವು ವ್ಯಕ್ತ ಪಡಿಸಿದರು.ಬಳಿಕ ಸ್ಥಳಕ್ಕಾಗಮಿಸಿ ಕುಂದಾಪುರ ಡಿ.ವೈ .ಎಸ್.ಪಿ ಬೆಳ್ಳಿಯಪ್ಪ,ಪ್ರೋಬೇಷನರಿ ಐಪಿಎಸ್ ಡಾ. ಹರ್ಷ ಪ್ರಿಯಂವದಾ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್ ಸಾರ್ವಜನಿಕರ ಜೊತೆ ಮಾತನಾಡಿ ಈಗಾಗಲೇ ವಿಚಾರದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ವಿದ್ಯಾರ್ಥಿಯಾಗಿರುವ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ.ಒಂದು ವಾರದೊಳಗೆ ತನಿಖೆ ನಡೆಸಿ ಸೂಕ್ತ ವರದಿ ನೀಡಲಾಗುವುದು.ತಪ್ಪಿದಸ್ಥರ ವಿರುದ್ದ ಸ್ಪಷ್ಟತೆ ದೊರೆತಲ್ಲಿ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಊರಿನ ಹಿರಿಯರು,ಸಮಾಜದ ಮುಖಂಡರು,ಸ್ಥಳೀಯರು ಕುಟುಂಬದವರಿಗೆ ದೈರ್ಯ ತುಂಬಿ ಮನವರಿಕೆ ಮಾಡಿದ ಬಳಿಕ ವಿದ್ಯಾರ್ಥಿಯ ಶವವನ್ನು ಮನೆಗೆ ಕಳುಹಿಸಿಕೊಡಲಾಯಿತು.ವಿದ್ಯಾರ್ಥಿ ಶವ ಮನೆಗೆ ತರುತ್ತಿದ್ದಂತೆ ಕುಟುಂದವರ ಆಕ್ರಂಧನ ಮುಗಿಲು ಮುಟ್ಟಿತ್ತು.

Leave a Reply

Your email address will not be published.

2 × 2 =