ಬೈಂದೂರು: ದೃಷ್ಟಿ ಪ್ರ(ದಾನ) ಯೋಜನೆ 2022-23,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ಪಟ್ಟಣ ಪಂಚಾಯತ್ ಬೈಂದೂರು,ರೋಟರಿ ಕ್ಲಬ್ ಬೈಂದೂರು,ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬೈಂದೂರು ಘಟಕ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ ಕಾರ್ಯಕ್ರಮ ಸೆ.16 ರಂದು ಪೂರ್ವಾಹ್ನ 9 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗನಾಡುವಿನಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.