ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಶೈಕ್ಷಣಿಕ,ಸಾಮಾಜಿಕ,ಸೇವಾ ಸಂಸ್ಥೆ ಇದರ ವತಿಯಿಂದ ಶಾಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಕ್ಲಾಸ್ ವಿತರಣಾ ಕಾರ್ಯಕ್ರಮ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪುವಿನಲ್ಲಿ ಮಂಗಳವಾರ ನಡೆಯಿತು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಸ್ಮಾರ್ಟ್ ಕ್ಲಾಸ್ ತರಗತಿಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಯ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮತ್ತು ಇತರೆ ಕೊಡುಗೆ ನೀಡುತ್ತಾ ಬರುತ್ತಿದ್ದೇವೆ. ಅದರಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲೆಗೆ ಉನ್ನತ ಮಟ್ಟದ ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಿರುತ್ತೇವೆ.ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ.ಇಲ್ಲಿನ ಶಿಕ್ಷಕ ವೃಂದ,ಶಾಲಾ ಎಸ್.ಡಿ.ಎಮ್.ಸಿ ಹಾಗೂ ಹಳೆ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸಿದರೆ ಶಾಲಾ ಅಭಿವೃದ್ಧಿ ಕಾರ್ಯ ನೆರವೇರಿಸಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಗುರು ಸೋಮಯಾಜಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ,ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವ ಶೆಟ್ಟಿ,ವರಲಕ್ಮೀ ಚಾರಿಟೇಬಲ್ ಟ್ರಸ್ಟ್‌ನ ನಾಗರಾಜ ಪಿ.ಯಡ್ತರೆ,ಕಾಲೇಜಿನ ಪ್ರಾಂಶುಪಾಲ ರಾಜೀವ ನಾಯ್ಕ, ಎಸ್.ಡಿ.ಎಮ್.ಸಿ ಸದಸ್ಯ ರಾಘವೇಂದ್ರ ನೆಂಪು,ಭುಜಂಗ ಶೆಟ್ಟಿ ದಂಪತಿಗಳು,ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಯವರನ್ನು ಸಮ್ಮಾನಿಸಲಾಯಿತು.
ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವಿರಾಜ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಕುಪ್ಪಯ್ಯ ಮರಾಠಿ ಸ್ವಾಗತಿಸಿದರು.ಶಿಕ್ಷಕ ಗಣೇಶ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ಫ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀಧರ ಭಟ್ ವಂದಿಸಿದರು.
News/Giri shiruru