ಬೈಂದೂರು: ಜಿ.ಪಂ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ರೋಟರಿ ಕ್ಲಬ್ ಬೈಂದೂರು,ಜೆಸಿಐ ಉಪ್ಪುಂದ ಹಾಗೂ ಜೆಸಿಐ ಬೈಂದೂರು ಸಿಟಿ ಇದರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಜೂ.27 ರಂದು ಪೂರ್ವಾಹ್ನ 09 ರಿಂದ ಮದ್ಯಾಹ್ನ 01 ಗಂಟೆಯ ವರೆಗೆ ಸಮುದಾಯ ಆರೋಗ್ಯ ಕೇಂದ್ರ ಬೈಂದೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.