ಬೈಂದೂರು: ರಕ್ತದ ಮಹತ್ವ ಅರಿತು ರಕ್ತದಾನ ಮಾಡಿದಲ್ಲಿ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯವಿದೆ.ರಕ್ತದಾನ ಕ್ಷೇತ್ರದಲ್ಲಿ ಮೊಗವೀರ ಯುವ ಸಂಘಟನೆ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹೊಸ ಕ್ರಾಂತಿ ಮಾಡಿದ್ದು ಲಕ್ಷಾಂತರ ಜೀವಗಳನ್ನು ಉಳಿಸಲು ಸಹಕರಿಸಿದೆ.ಸ್ವ-ಪ್ರೇರಣೆಯಿಂದ ರಕ್ತದಾನ ಮಾಡುವುದರಿಂದ ಜೀವನ್ಮರಣ ಹೋರಾಟದಲ್ಲಿರುವವರ ಪ್ರಾಣ ಉಳಿಸಿದ ಪುಣ್ಯ ಪ್ರಾಪ್ತವಾಗುತ್ತದೆ.ರಕ್ತದಾನಕ್ಕೆ ವಿಶೇಷವಾದ ಪ್ರಾಮುಖ್ಯವಿದೆ.ದಾನದಲ್ಲಿ ಶ್ರೇಷ್ಟ ದಾನ ರಕ್ತದಾನವಾಗಿದೆ ಎಂದು ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಹೇಳಿದರು ಅವರು ಬೈಂದೂರು ಅಂಬೇಡ್ಕರ್ ಭವನದಲ್ಲಿ ನಡೆದ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ,ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ,ರಕ್ತನಿಧಿ ಕೆ.ಎಂ.ಸಿ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇದರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ. ಕಸ್ಟಮ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋ ಬೈಂದೂರು ಭಜನಾ ಪರಿಷತ್ ಗೌರವಾಧ್ಯಕ್ಷ ರಘುರಾಮ ಕೆ.ಪೂಜಾರಿ ಶಿರೂರು,ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ರಾಮ ಎಚ್. ಕಳವಾಡಿ,ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ್ ಪ್ರಭು, ಬೈಂದೂರು ಮೆಸ್ಕಾಂ ಇಲಾಖೆಯ ಕೃಷ್ಣ ಮೊಗವೀರ,ಕೆ.ಎಂ.ಸಿ. ಮಣಿಪಾಲ ರಕ್ತನಿಧಿ ವಿಭಾಗದ ಡಾ.ಅಜಿತ್,ಸಂಘದ ನಿಕಟಪೂರ್ವಾಧ್ಯಕ್ಷ ರವಿರಾಜ್ ಚಂದನ್ ಕಳವಾಡಿ, ಭಟ್ಕಳ ಕೆನರಾ ಬ್ಯಾಂಕ್ ಉದ್ಯಮಿ ಸುನೀಲ ಎಸ್. ಮೊಗವೀರ,ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ರವೀಶ್ ಎಸ್. ಕೊರವಡಿ,ಮೊಗವೀರ ಯುವ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಪುತ್ರನ್ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಚಂದ್ರ ಸೂಕುಂದ ಸ್ವಾಗತಿಸಿದರು.ಉಪನ್ಯಾಸಕ ಪಾಂಡುರಂಗ ಮೊಗವೀರ ತಗ್ಗರ್ಸೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಶಂಕರ್ ಬೈಂದೂರು