ಬೈಂದೂರು; ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಜಿಲ್ಲಾ ಬಿಜೆಪಿ ಮಾರ್ಗದರ್ಶನದಲ್ಲಿ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಸೇವಾ ಪ್ರಾಕ್ಷಿಕ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ನಡೆಯಲಿದೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ನೆಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸೆ.17 ರಿಂದ ವಿವಿಧ ಕಡೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ,ಜೀವ ರಕ್ಷಕ ಲಸಿಕಾ ಅಭಿಯಾನ,ನರೇಂದ್ರ ಮೋದಿಯವರ ಜೀವನ ಚರಿತ್ರೆಯ ಪ್ರದರ್ಶಿನಿ,ರಕ್ತದಾನ ಶಿಬಿರ,ಕಮಲೋತ್ಸವ (ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಯಂತಿ),ಫಲಾನುಭವಿಗಳ ಸಭೆ ಹಾಗೂ ನೋಂದಣಿ ಅಭಿಯಾನ ,ಸ್ವಚ್ಛತಾ ಅಭಿಯಾನ,ಅರಳಿ ಮರ ನೆಡುವ ಅಭಿಯಾನ ,ಅಮೃತ ಸರೋವರ ,ಖಾದಿ ಉತ್ಸವ,ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಅಭಿಯಾನ,ಕಯರೋಗ ನಿರ್ಮೂಲನಾ ಅಭಿಯಾನ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ,ಸೇವಾ ಪ್ರಾಕ್ಷಿಕ ಅಭಿಯಾನದ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ,ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೆರ್ಕಾಡಿ,ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಽ ಹೆಗ್ಡೆ ಉಪಸ್ಥಿತರಿದ್ದರು.ಬಿಜೆಪಿ ಮಂಡಲದ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

News/pic: Girish shiruru

 

Leave a Reply

Your email address will not be published.

one × 4 =