ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ತಾಲ್ಲೂಕು ಆಡಳಿತ,ತಾಲೂಕು ಪಂಚಾಯತ್ ಬೈಂದೂರು ಹಾಗೂ ಪಟ್ಟಣ ಪಂಚಾಯತ್ ಬೈಂದೂರು ಇದರ ವತಿಯಿಂದ ಜನಸ್ಪಂಧನ ಸಭೆ ಬೈಂದೂರು ತಾಲೂಕು ಆಡಳಿತ ಕಛೇರಿಯಲ್ಲಿ ನಡೆಯಿತು.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನಸ್ಪಂಧನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಲೂಕು ಮಟ್ಟದಲ್ಲಿ ಜಿಲ್ಲಾಡಳಿತ ವ್ಯಾಪ್ತಿಯ ಅಧಿಕಾರಿಗಳನ್ನು ಕರೆದು ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಸರಕಾರ ಆರಂಭಿಸಿದ ಯೋಜನೆಯ ಮೂಲ ಉದ್ದೇಶವಾಗಿದೆ.ಮನವಿಗಳು ಕೇವಲ ಸಭೆಗೆ ಸೀಮಿತವಾಗಿರದೆ.ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಬೇಕು.ಜನಸಂಧನೆ ಸಭೆ ಯಶಸ್ವಿಯಾದಾಗ ಜಿಲ್ಲಾಡಳಿತದ ಮೇಲೆ ಇನ್ನಷ್ಟು ಭರವಸೆ ಮೂಡುತ್ತದೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕೆಲವು ಸಮಸ್ಯೆಗಳು ಅನೇಕ ಸಮಯದಿಂದ ಬಾಕಿ ಉಳಿದಿದ್ದು ವಿವಿಧ ಇಲಾಖೆ ವ್ಯಾಪ್ತಿಗಳಲ್ಲಿ ಅವುಗಳನ್ನು ತಕ್ಷಣ ಪರಿಹರಿಸಿ ನ್ಯಾಯ ಕೊಡುವ ಉದ್ದೇಶದಿಂದ ಸರಕಾರ ಜನಸಂಧನ ಸಭೆಯನ್ನು ಜಾರಿಗೆ ತಂದಿದೆ.ಇದರಿಂದ ಸಾರ್ವಜನಿಕರ ಬಹುತೇಕ ಸಮಸ್ಯೆಗಳು ಸ್ಥಳದಲ್ಲೆ ಇತ್ಯರ್ಥವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ,ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ,ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಯಲ್,ಕುಂದಾಪುರ ಸಹಾಯಕ ಕಮಿಷನರ್ ರಶ್ಮೀ ಆರ್,ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ,ಬೈಂದೂರು ತಹಶೀಲ್ದಾರ ಪ್ರದೀಪ್ ಆರ್,ಡಿ.ಡಿ.ಎಲ್.ಆರ್ ರವೀಂದ್ರ, ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್,ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕ ಗಣಪತಿ ಹೋಬಳಿದಾರ್ ಹಾಗೂ ರಾಮಕೃಷ್ಣ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ ವಂದಿಸಿದರು.
News/Giri shiruru