ಶಿರೂರು: ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಶಿರೂರು ಇದರ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನೆ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು.
ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ಆಂಗ್ಲ ಮಾಧ್ಯಮ ತರಗತಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಸಿಗುತ್ತದೆ.ಬದಲಾಗುತ್ತಿರುವ ಶೈಕ್ಷಣಿಕ ವ್ಯವಸ್ಥೆಗೆ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ.ಸ್ಥಳೀಯ ಅವಕಾಶಗಳನ್ನು ಬಳಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸಬೇಕಾಗಿದೆ ಎಂದರು.
ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗರತ್ನ ಆಚಾರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರಘುವೀರ್ ಶೇಟ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸಮನೆ, ಶಾಲಾ ಎಸ್‌ಡಿಸಿ ಅಧ್ಯಕ್ಷ ಚಿಕ್ಕು ಪೂಜಾರಿ,ಗ್ರಾ.ಪಂ ಸದಸ್ಯೆ ಪ್ರೇಮಾ ಮೊಗವೀರ, ಉಷಾ ಜನಾರ್ದನ್ ಗಾಣಿಗ,ಪ್ರಸನ್ನ ಶೆಟ್ಟಿ,ತಾಯಂದಿರ ಸಮಿತಿ ಅಧ್ಯಕ್ಷೆ ಚಿತ್ರಾ ಅರುಣ ಮೇಸ್ತ,ಉಪಾದ್ಯಕ್ಷೆ ದೇವಕಿ ಬಿಲ್ಲವ,ಅಶೋಕ ಕೆ.ಶೆಟ್ಟಿ, ಆಶಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶಂಕರ್ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಸಿ. ಎನ್.ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕ ಸೋಮರಾಯ ಜನ್ನು ವಂದಿಸಿದರು.
News/Giri Shiruru
photo:Suresh makodi