ಬೈಂದೂರು: ಬೈಂದೂರು ಸಮೀಪದ ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾನುವಾರ ಬೇಟಿ ನೀಡಿದರು.ಇಲ್ಲಿನ ಸೋಮೇಶ್ವರ ಅಭಿವೃದ್ದಿ ಕಾಮಗಾರಿ ಮತ್ತು ಗುಡ್ಡ ಕುಸಿತ ಸ್ಥಳವನ್ನು ವೀಕ್ಷಿಸಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಹಾನಿ ವರದಿ ಪಡೆದು ಶೀಘ್ರ ಸರಕಾರದಿಂದ ದೊರೆಯುವ ಪರಿಹಾರವನ್ನು ಒದಗಿಸಿಕೊಡಲಾಗಿತ್ತದೆ.ಸೋಮೆಶ್ವರ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಪಡೆಯುತ್ತೇನೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದರು.ಬಳಿಕ ವತ್ತಿನೆಣೆಯಲ್ಲಿ ಹೆದ್ದಾರಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ,ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್,ಕುಂದಾಪುರ ಸಹಾಯಕ ಕಮಿಷನರ್ ರಶ್ಮೀ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ತಹಶೀಲ್ದಾರ ಪ್ರದೀಪ್ ಆರ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ನಾಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವರದಿ/ಚಿತ್ರ: ಗಿರಿ ಶಿರೂರು