ಬೈಂದೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೇಸ ಸರಕಾರ SC/ST ಸಮುದಾಯದ ಹಣ ದುರುಪಯೋಗ, ಮುಡಾ ಹಗರಣ, ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತ ಖಂಡಿಸಿ ದೆಹಲಿಯ ಸಂಸತ್ ಭವನದ ಮುಂಭಾಗದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಶಿವಮೊಗ್ಗ ಲೋಕಸಭಾ ಸಂಸದ ಬಿ.ವ್ಯೆ.ರಾಘವೇಂದ್ರ,ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಡಾ. ಸಿ ಮಂಜುನಾಥ್,ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.