ಬೈಂದೂರು; ಬದಲಾವಣೆ ಅನ್ನೋದು ಜಗದ ನಿಯಮ ಬದಲಾವಣೆಗಳಿಗೆ ಒಗ್ಗಿಕೊಂಡು ಮುನ್ನೆಡೆಯಬೇಕಿದೆ.ನಮ್ಮ ಬದುಕಿಗೆ ಉದ್ದೇಶ ಗುರಿ ಮತ್ತು ಆಶಯಗಳಿರಬೇಕು ಸಾರ್ಥಕತೆಯ ಸಂತ್ರಪ್ತಿ ದೊರೆಯಬೇಕಾದರೆ ಸಾಧನೆಯ ಬದುಕು ನಮ್ಮದಾಗಬೇಕು ಎಂದು ಕಾಳಾವರ ವರದರಾಜ್ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ನಾಯಕ ಹೇಳಿದರು ಅವರು ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭ ಪುರಸ್ಕಾರ ವಿತರಿಸಿ ಈ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಜಗನ್ನಾಥ ಶೆಟ್ಟಿ,ಧ.ಮ.ಆರ್ಯುವೇದ ಕಾಲೇಜಿನ ಅಧೀಕ್ಷಕ ಡಾ. ನಾಗರಾಜ ಪೂಜಾರಿ,ಸಂಘದ ಉಪಾಧ್ಯಕ್ಷ ವಿನಾಯಕ ರಾವ್ ಮರವಂತೆ, ನಿರ್ದೇಶಕರಾದ ಸೀತಾರಾಮ ಮಡಿವಾಳ, ರಾಮಕೃಷ್ಣ  ಖಾರ್ವಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ,ಪ್ರಶಾಂತ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ,ಲೆಕ್ಕ ಪರಿಶೋಧಕ (ಸಿ.ಎ) ಪ್ರದೀಪ ರವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು.ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಕೌಸ್ತುಭ ಹಾಗೂ ಸುಶನ್ ನಾರಾಯಣ ಬಿಲ್ಲವ ರವನ್ನು ಗೌರವಿಸಲಾಯಿತು.ಸಂಘದ ಅರ್ಹ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಂದಿಸಿದರು.

News/Giri shiruru

pic/Shashank Karanth Byndoor 

 

 

 

 

Leave a Reply

Your email address will not be published.

17 + 7 =