ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ ಇದರ ವತಿಯಿಂದ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ ಹಾಗೂ ವನಮಹೋತ್ಸವ ಕಾರ್ಯಕ್ರಮ ಬೈಂದೂರು ಬಂಟರಯಾನೆ ನಾಡವರ ಸಭಾಭವನ ಯಡ್ತರೆಯಲ್ಲಿ ನಡೆಯಿತು.
ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ಸಾಧಕರಿದ್ದಾರೆ.ಸಾಧಿಸುವ ಸಮಯದಲ್ಲಿ ಉತ್ತಮ ಪ್ರೋತ್ಸಾಹ ದೊರೆತಾಗ ಇನ್ನಷ್ಟು ಸಾಧನೆ ಸಾಧ್ಯ.ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಯಶಸ್ಸು ಕಾಣಬೇಕು.ಮೊಗವೀರ ಯುವ ಸಂಘಟನೆ ಬೈಂದೂರು – ಶಿರೂರು ಸಂಘಟನೆ ಜಿಲ್ಲೆಯಲ್ಲಿಯೇ ಉತ್ತಮ ಹೆಸರು ಹಾಗೂ ಗೌರವ ಉಳಿಸಿಕೊಂಡಿರುವುದು ಸಂಘದ ಸಮಾಜಮುಖಿ ಸಾಧನೆಯ ಹಿರಿಮೆ ಎಂದರು.
ಮೊಗವೀರ ಯುವ ಸಂಘಟನೆ ಬೈಂದೂರು – ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ. ಕಸ್ಟಮ್ ಅಧ್ಯಕ್ಷತೆ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಪ್ರತಿಭಾ ಪುರಸ್ಕಾರದ ದಾನಿಗಳಾದ ಕೃಷ್ಣ ಮೊಗವೀರ ಬಿಂದುಮನೆ,ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಸ್ತಿರೋಗ ತಜ್ಞರಾದ ಡಾ.ರಾಜೇಶ ಸಿ.ಸೌಕೂರು,ಹಿರಿಯರಾದ ಎಮ್.ಎಮ್.ಸುವರ್ಣ, ಬಗ್ವಾಡಿ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮೊಗವೀರ ಯುವ ಸಂಘಟನೆ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ಸುವರ್ಣ,ಕಟ್ಟಡ ರಚನಾ ಸಮಿತಿ ಅಧ್ಯಕ್ಷ ರಾಮ ಮೊಗವೀರ ಕಳವಾಡಿ,ಮತ್ಸೋಧ್ಯಮಿ ರಾಮ ಎನ್. ಅಳ್ವೆಗದ್ದೆ,ನಿವೃತ್ತ ಯೋಧ ಚಂದ್ರ ಮೊಗವೀರ ತೊಂಡೆಮಕ್ಕಿ,ಮಾಜಿ ತಾ.ಪಂ ಸದಸ್ಯೆ ಶ್ಯಾಮಲಾ ಕುಂದರ್ ನಾವುಂದ,ಮದನ್ ಕುಮಾರ್ ಉಪ್ಪುಂದ, ನಿಕಟಪೂರ್ವಾಧ್ಯಕ್ಷ ರವಿರಾಜ್ ಚಂದನ್ ಕಳವಾಡಿ,ಮೊಗವೀರ ಯುವ ಸಂಘಟನೆ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಪುತ್ರನ್ ,ಮಾಜಿ ಜಿಲ್ಲಾ ಕಾರ್ಯದರ್ಶಿ ರವೀಶ್ ಕೊರವಡಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರದ ದಾನಿಗಳಾದ ಕೃಷ್ಣ ಮೊಗವೀರ ಬಿಂದುಮನೆ ಹಾಗೂ ಹಿರಿಯ ಗುರಿಕಾರ ಪಂಜು ಮೊಗವೀರ ಹಾಗೂ ಗಿರೀಶ್ ಶಿರೂರು ರವರನ್ನು ಸಮ್ಮಾನಿಸಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.
ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಕಾರ್ಯದರ್ಶಿ ಚಂದ್ರಶೇಖರ ಮೊಗವೀರ ಸೂಕುಂದ ಸ್ವಾಗತಿಸಿದರು.ನಿಕಟಪೂರ್ವಾಧ್ಯಕ್ಷ ಪಾಂಡುರಂಗ ಮೊಗವೀರ ತಗ್ಗರ್ಸೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
News/Giri shiruru
pic/ Shankar Byndoor