ಬೈಂದೂರು: ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 170ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.
ಬೈಂದೂರು ತಾಲೂಕು ಆಡಳಿತಾಧಿಕಾರಿ ಪ್ರದೀಪ್ ಆರ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭೋಧನೆಗಳು ಹಾಗೂ ತತ್ವಾದರ್ಶಗಳು ಇಡೀ ಮಾನವ ಕುಲಕ್ಕೆ ಮಾರ್ಗದರ್ಶಿಯಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ದಲಿತರು, ಹಿಂದುಳಿದ ವರ್ಗಗಳ ಸಮುದಾಯವನ್ನು ಉನ್ನತಮಟ್ಟಕ್ಕೆ ಏರಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ.ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಅಮರ ಎಂದರು.
ಈ ಸಂದರ್ಭದಲ್ಲಿ ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಪಟ್ಟಣ ಪಂಚಾಯತ್ ಅಧಿಕಾರಿ ಅಜಯ್ ಭಂಡಾರ್‌ಕರ್,ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಪೂಜಾರಿ,ಉಪಾಧ್ಯಕ್ಷ ಶೇಖರ ಪೂಜಾರಿ,ಎಸ್.ರಾಜು ಪೂಜಾರಿ,ಬೈಂದೂರು ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ, ಬೈಂದೂರು-ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ,ಶಿರೂರು ಬಿಲ್ಲವ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಶಿರೂರು,ಅಗ್ನಿ ಶಾಮಕದಳ ಅಧಿಕಾರಿಗಳು,ಬೈಂದೂರು ತಾಲೂಕು ನಾರಾಯಣ ಗುರು ಸಂಘದ ಪದಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಸಿಬಂದಿಗಳು ಹಾಜರಿದ್ದರು.
ಶಿಕ್ಷಕ ಪ್ರಭಾಕರ ಬಿಲ್ಲವ ಗುರುವಂದನೆ ಸಲ್ಲಿಸಿದರು.ಕಿಶೋರ್ ಪೂಜಾರಿ ಸಸಿಹಿತ್ಲು ಸ್ವಾಗತಿಸಿದರು.ಗಣೇಶ ಪೂಜಾರಿ ಯೋಜನಾನಗರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
News/Giri Shiruru