ಶಿರೂರು: ಜಿಲ್ಲಾಡಳಿತ ಉಡುಪಿ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ  ಉಡುಪಿ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಶಿರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಬೈಂದೂರು ತಾಲೂಕು ದಂಡಾಧಿಕಾರಿ ಪ್ರದೀಪ್ ಆರ್ ಮಾತನಾಡಿ ಸೆ.೧೫ ರಂದು ಪೂರ್ವಾಹ್ನ 9 ಗಂಟೆಗೆ ಶಿರೂರು ಟೋಲ್‌ಗೇಟ್ ನಿಂದ ವತ್ತಿನೆಣೆ ರಾಘವೇಂದ್ರ ಮಠದ ವರೆಗೆ ನಡೆಯಲಿದ್ದು ಶಿರೂರು ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಎಲ್ಲಾ ಶಾಲೆಯ ವಿದ್ಯಾರ್ಥಿಗಳು,ಶಿಕ್ಷಕರು ಈ ಪ್ರಜಾಪ್ರಭುತ್ವದ ಹಬ್ಬವನ್ನು ವಿಶೇಷ ರೀತಿಯಲ್ಲಿ ನಡೆಸಬೇಕು ಎಂದರು.

ಈ ಸಂದರ್ಭದಲ್ಲಿ ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ,ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್,ಸ.ಪ್ರ.ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ,ಸಹಾಯಕ ತೋಟಗಾರಿಕಾ ಇಲಾಖೆಯ ಪ್ರವೀಣ್,ಶಿರೂರು ಗ್ರಾಮ ಲೆಕ್ಕಾಧಿಕಾರಿ ವಿಜಯ್ ಕುಮಾರ್ ಉಪಸ್ಥಿತರಿದ್ದರು.

ಬೈಂದೂರು ತಾಲೂಕು ಪಶು ವೈದ್ಯಾಧಿಕಾರಿ ಡಾ.ನಾಗರಾಜ್ ಮರವಂತೆ ಮಾನವ ಸರಪಳಿ ಕಾರ್ಯಕ್ರಮದ  ಬಗ್ಗೆ ಮಾಹಿತಿ ನೀಡಿದರು.ಶಿರೂರು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ರಾಜೇಂದ್ರ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ಶಂಕರ ಬಿಲ್ಲವ ವಂದಿಸಿದರು.

 

Leave a Reply

Your email address will not be published.

13 + seven =