ಶಿರೂರು: ಉಡುಪಿ ಜಿ.ಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಮನೆಹಕ್ಲು ಇದರ ಸಹಯೋಗದೊಂದಿಗೆ ಬೈಂದೂರು ಹೋಬಳಿ ಮಟ್ಟದ ಕ್ರೀಡಾಕೂಟ ಸ.ಪ.ಪೂ ಕಾಲೇಜು ಮೈದಾನ ಶಿರೂರಿನಲ್ಲಿ ನಡೆಯಿತು.
ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಬೈಂದೂರು ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಜೊತೆಗೆ ಕ್ರೀಡೆ ಅತ್ಯಗತ್ಯ.ಉತ್ತಮ ಆರೋಗ್ಯವಿರುವ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ.ಗೆಲುವು ಜವಬ್ದಾರಿ ಹೆಚ್ಚಿಸುತ್ತದೆ.ಸೋಲು ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ ಹಾಗೂ ವಿದ್ಯಾರ್ಥಿಗಳು ಸ್ನೇಹಪೂರ್ವಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರ ಮೇಸ್ತ ಅಧ್ಯಕ್ಷತೆ ವಹಿಸಿದ್ದರು.ಸ.ಪ.ಪೂ ಕಾಲೇಜಿನ ಉಪಪ್ರಾಂಶುಪಾಲ ಬೊಮ್ಮಯ್ಯ ಗಾಂವ್ಕರ್ ಕ್ರೀಡಾಜ್ಯೋತಿ ಬೆಳಗಿಸಿದರು.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್,ಗ್ರಾ.ಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಕಾವೇರಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ,ಜ್ಯೋತಿ ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಪರಿವೀಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಅರಮನೆಹಕ್ಲು ಶಾಲೆಯ ಮುಖ್ಯ ಶಿಕ್ಷಕಿ ಸೀಮಾ ನಾಯ್ಕ ಸ್ವಾಗತಿಸಿದರು.ಮಣಿಕಂಠ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕ ಶ್ರೀಕಾಂತ ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಪವನ್ ಮೇಸ್ತ ಶಿರೂರು