ಶಿರೂರು: ಜಿಲ್ಲಾಡಳಿತ ಉಡುಪಿ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಶಿರೂರು ಇದರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಉಡುಪಿ ಜಿಲ್ಲೆಯ ಗಡಿಭಾಗವಾದ ಶಿರೂರು ಟೋಲ್‌ಗೇಟ್ ಬಳಿ ಚಾಲನೆ ನೀಡಿದರು.
ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಈ ದೇಶದ ಬಹುದೊಡ್ಡ ಶಕ್ತಿ.ಸಂವಿಧಾನಕ್ಕೆ ಗೌರವ ನೀಡುವ ಜೊತೆಗೆ ಮಾನವ ಸರಪಳಿ ಮೂಲಕ ವಿಶಿಷ್ಟವಾಗಿ ಜಾಗೃತಿ ಮೂಡಿಸಿರುವುದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಭಿನ್ನ ಮತ್ತು ವಿಶಿಷ್ಟವಾಗಿ ಆಚರಿಸುವುದು ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಶಿರೂರು ಗ್ರಾ.ಪಂ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್,ಶಿರೂರು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ರಾಜೇಂದ್ರ,ಪಶು ವೈದ್ಯಾಧಿಕಾರಿ ಡಾ.ನಾಗರಾಜ್,ಸಮಾಜ ಕಲ್ಯಾಣ ಇಲಾಖೆಯ ರಾಘವೇಂದ್ರ ವರ್ಣೆಕರ್,ಶಿರೂರು ಗ್ರಾಮ ಲೆಕ್ಕಾಧಿಕಾರಿ ವಿಜಯ್ ಕುಮಾರ್,ಶಿರೂರು ಗ್ರಾಮ ಪಂಚಾಯತ್ ಸದಸ್ಯರು,ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು,ಸದಸ್ಯರು,ವಿವಿಧ ಇಲಾಖೆಯ ಅಧಿಕಾರಿಗಳು,ವಿವಿಧ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು,ಶಿಕ್ಷಕರು,ಧ.ಗ್ರಾ.ಯೋಜನೆಯ ಸ್ವ-ಸಹಾಯ ಸಂಘದ ಸದಸ್ಯರು ಮಾನವ ಸರಪಳಿಯಲ್ಲಿ ಭಾಗವಹಿಸಿದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ ಸಂವಿಧಾನದ ಪೀಠಿಕೆ ವಾಚಿಸಿದರು. ಶಿಕ್ಷಕ ರಾಮಕೃಷ್ಣ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ಶಂಕರ ಬಿಲ್ಲವ ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಪವನ್ ಮೇಸ್ತ ಶಿರೂರು