ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು.

ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ ಸಂಸ್ಥೆಯು ಉತ್ತಮ ಆರ್ಥಿಕ ಸಾಧನೆ ಮೂಲಕ ಪ್ರಗತಿಯ ಪಥದಲ್ಲಿದ್ದು ಕೃಷಿ,ಹೈನುಗಾರಿಕೆ ಸದಸ್ಯರ ಸ್ವಾವಲಂಬನೆಯ ಬದುಕಿಗೆ ಆರ್ಥಿಕ ಶಕ್ತಿ ನೀಡುವ ಜೊತೆಗೆ ಶಿಕ್ಷಣ ಆರೋಗ್ಯ ಕ್ಷೇತ್ರ ಸೇವೆ ಮಾಹಿತಿ ಕಾರ್ಯಕ್ರಮಗಳನ್ನು ನಿರಂತರ ಆಯೋಜಿಸುತ್ತಿದೆ.

ಸಂಘವು ಪ್ರಸಕ್ತ ಸಾಲಿನಲ್ಲಿ 324.91 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ.1.55 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14% ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 66.64 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 58.86 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದೆ. ವಿವಿಧ ನಿಧಿಗಳಲ್ಲಿ 5.33 ಕೋಟಿ ರೂ., ಹೂಡಿಕೆಯಲ್ಲಿ 29.52ಕೋಟಿ ರೂ. ಸಂಚಯಿಸಲಾಗಿದೆ.ಸಂಘದ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಸದಸ್ಯರ ಸಹಕಾರದಿಂದ ಸಂಸ್ಥೆಯು ಉತ್ತಮ ಪ್ರಗತಿ ಸಾಽಸಿದ್ದು, ಪ್ರಧಾನ ಕಛೇರಿ ಸೇರಿದಂತೆ ಎಲ್ಲಾ ಶಾಖೆಗಳೂ ಸ್ವಂತ ನಿವೇಶನ, ಕಟ್ಟಡ ಹಾಗೂ ಗೋದಾಮು ಹೊಂದಿದ್ದು, ಪ್ರಧಾನ ಕಟ್ಟಡ ನವೀಕರಣ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ಲೆಪ್ಟಿನೆಂಟ್ ಭರತ್ ದೇವಾಡಿಗ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ಪ್ರಗತಿ ಉದಯ ಕುಮಾರ್ ಮರವಂತೆ ಯವರನ್ನು ಸಮ್ಮಾನಿಸಲಾಯಿತು.

ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಭೋಜ ನಾಯ್ಕ, ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ರಾಮೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ನಾಗಮ್ಮ, ಸರೋಜಾ ಆರ್. ಗಾಣಿಗ,ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಶಿವರಾಮ ಪೂಜಾರಿ ಉಪಸ್ಥಿತರಿದ್ದರು.

ನಾಮ ನಿರ್ದೇಶಿತ ನಿರ್ದೇಶಕ ಎಂ. ವಿನಾಯಕ ರಾವ್ ಸ್ವಾಗತಿಸಿದರು.ಸೋಮಯ್ಯ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವಂದಿಸಿದರು.

Leave a Reply

Your email address will not be published.

five + 18 =