ಶಿರೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇದರ ಶಿರೂರು ಶಕ್ತಿ ಕೇಂದ್ರದ ವತಿಯಿಂದ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮ ಶಿರೂರು ಹೊಸ್ಮನೆ ಪುಷ್ಪರಾಜ್ ಶೆಟ್ಟಿಯವರ ನಿವಾಸದಲ್ಲಿ ನಡೆಯಿತು.
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಭಾರಮಾತೆಗೆ ಪುಷ್ಪನಮನ ಸಲ್ಲಿಸಿದರು.
ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ ಭಾರತಮಾತೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿ ಪ್ರಧಾನಿ ಮೋದಿ ಜೀಯವರ ಆದರ್ಶಗಳನ್ನು ನಾವು ಪಾಲಿಸಬೇಕಿದೆ.ಪಕ್ಷ ಸಂಘಟನೆ ಜೊತೆಗೆ ಜನಪರವಾದ ಕಾರ್ಯಕ್ರಮ ನಡೆಸುವುದು ಹಾಗೂ ಅರಿವು ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ.ತಾಲೂಕಿನಾದ್ಯಂತ ಸೇವಾ ಪಾಕ್ಷಿಕದ ಅಡಿಯಲ್ಲಿ ರಕ್ತದಾನ ಶಿಬಿರ,ಸ್ವಚ್ಚತಾ ಅಭಿಯಾನ,ಸಸಿ ನೆಡುವ ಕಾರ್ಯಕ್ರಮ ಹೀಗೆ ನಾನಾ ರೀತಿಯ ಸೇವಾ ಚಟುವಟಿಕೆಗಳಲ್ಲಿ ಹುಮ್ಮಸ್ಸಿನಿಂದ ತೊಡಗಿಸಿಕೊಳ್ಳುವ ಮೂಲಕ ಭಾರತದಲ್ಲಿ ವಿವಿಧತೆಯಲ್ಲಿ ಏಕತೆಯ ಕುರಿತು ಏಕ್ ಭಾರತ್ ಶ್ರೇಷ್ಟ್ ಭಾರತ್ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದರು.
ಮಾಜಿ ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಮಾಧವ ಬಿಲ್ಲವ ರವರನ್ನು ಸಮ್ಮಾನಿಸಲಾಯಿತು.
ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ಆಕ್ರಮ ಸಕ್ರಮ ಸಮಿತಿ ಸದಸ್ಯ ದಿನೇಶ್ ಕುಮಾರ್,ಗ್ರಾ.ಪಂ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ,ಸುರೇಂದ್ರ ದೇವಾಡಿಗ,ಶಂಕರ ಡಿ.ಮೇಸ್ತ,ಮಾಜಿ ಗ್ರಾ.ಪಂ ಸದಸ್ಯರಾದ ರವೀಂದ್ರ ಶೆಟ್ಟಿ ಹೊಸ್ಮನೆ,ಮಂಗಳು ಬಿಲ್ಲವ ಕರಾವಳಿ,ದಿನಕರ ಗಾಣಿಗ,ಬೂತ್ ಅಧ್ಯಕ್ಷರಾದ ಅಶೋಕ ಶೆಟ್ಟಿ ಕಾರಿಕಟ್ಟೆ,ರವೀಂದ್ರ ಶೆಟ್ಟಿ ಹೊನ್ಕೇರಿ,ರತ್ನಾಕರ ಮೇಸ್ತ ಕಳಿಹಿತ್ಲು,ಅಣ್ಣಪ್ಪ ಮೇಸ್ತ,ಸತೀಶ ಪ್ರಭು,ಕೇಶವ ಮೇಸ್ತ,ಉಪಸ್ಥಿತರಿದ್ದರು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ತುಳಸಿದಾಸ್ ಮೊಗೇರ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
News/pic Giri shiruru