ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 36ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ ಅ.09 ರಿಂದ 12ರ ವರೆಗೆ ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ.
ಅ.09 ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾಪನೆ,ಪೂಜಾ ವಿಧಿ ವಿಧಾನಗಳು ನಡೆಯಲಿದೆ.ಸಂಜೆ 6 ಗಂಟೆಗೆ ಕ್ಕೆ ವೆಂಕಟೇಶ್ವರ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ಪೂಜೆ,ಪ್ರಸಾದ ವಿತರಣೆ ರಾತ್ರಿ 8:30ಕ್ಕೆ ಕಲಾಸ್ಪೂರ್ತಿ ಹವ್ಯಾಸಿ ನಾಟಕ ತಂಡ ಕುಂದಾಪುರ ಇವರಿಂದ ಮದಿಮನಿ ನಾಟಕ ಪ್ರದರ್ಶನಗೊಳ್ಳಲಿದೆ.
ಅ.10 ರಂದು ಬೆಳಿಗ್ಗೆ ದುರ್ಗಾಹೋಮ, ರಾತ್ರಿ 8 ಕ್ಕೆ ರಂಗಪೂಜೆ ನಡೆಯಲಿದೆ ಬಳಿಕ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿದ್ಯ ಕಾರ್ಯಕ್ರಮ ನಡೆಯಲಿದೆ.
ಅ.11 ರಂದು ಬೆಳಿಗ್ಗೆ ಚಂಡಿಕಾಹೋಮ,ಮದ್ಯಾಹ್ನ ಅನ್ನಸಂತರ್ಪಣೆ ಬಳಿಕ ಸಂಜೆ ಯಕ್ಷ ನಕ್ಷತ್ರ ಟ್ರಸ್ಟ್ ಕಿರಾಡಿ ಇವರ ಪ್ರಸ್ತುತಿಯಲ್ಲಿ ಪಾಂಚಜನ್ಯಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಅ.12 ರಂದು ಸಂಜೆ 4 ಕ್ಕೆ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಪೂಜೆ,ಮಹಿಳಾ ಹಾಗೂ ಪುರುಷ ತಂಡಗಳಿಂದ ಭಜನಾ ತಂಡಗಳ ಆಕರ್ಷಣ ಮೆರವಣಿಗೆ ಬಳಿಕ ದೇವಸ್ಥಾನದ ಎದುರಿನ ಕೆರೆಯಲ್ಲಿ ವಿಗ್ರಹದ ಜಲಸ್ಥಂಭನ ನಡೆಯಲಿದೆ ಎಂದು ಶಾರದೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.