ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಯಡ್ತರೆ ಇದರ 2021-22ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಬಂಟರಯಾನೆ ನಾಡವರ ಸಂಘ ಯಡ್ತರೆ ಬೈಂದೂರಿನಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ವರದಿ ವರ್ಷದಲ್ಲಿ ಸಂಘವು ಅಡಿಟ್ ವರ್ಗಿಕರಣದಲ್ಲಿ ಎ ಶ್ರೇಣಿ ಪಡೆದಿದ್ದು ಒಟ್ಟು 11,672 ಸದಸ್ಯರನ್ನು ಹೊಂದಿದೆ.ರೂಪಾಯಿ 2.32 ಕೋಟಿ ರೂಪಾಯಿ ಪಾಲು ಬಂಡವಾಳ ಹೊಂದಿದ್ದು ವರದಿ ವರ್ಷದಲ್ಲಿ 601.40 ಕೋಟಿಗೂ ಮೀರಿ ವ್ಯವಹಾರ ನಡೆಸಿದೆ.ಪ್ರಸಕ್ತ ಸಾಲಿನಲ್ಲಿ ಸಂಘವು 76,25,577 ಲಾಭಗಳಿಸಿದ್ದು ಸದಸ್ಯರಿಗೆ ಶೇ.15% ಡಿವಿಡೆಂಡ್ ಘೋಷಣೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಎಸ್. ವೆಂಕಟ ಪೂಜಾರಿ, ಕೃಷ್ಣ ದೇವಾಡಿಗ, ಗಿರೀಶ್ ಮೇಸ್ತ, ಚಿಕ್ಕು ಪೂಜಾರಿ, ವಸಂತ ಕುಮಾರ ಶೆಟ್ಟಿ, ಎನ್. ನಾಗರಾಜ ಶೆಟ್ಟಿ, ಕೃಷ್ಣ ನಾಯ್ಕ, ಶಂಕರ ನಾಯ್ಕ, ಸದಾಶಿವ ಡಿ. ಶೇರುಗಾರ್, ಟಿ. ಬಾಬು ಶೆಟ್ಟಿ, ಜ್ಯೋತಿ ಶೇರುಗಾರ್, ರಜನಿ ಶ್ಯಾನುಭಾಗ್, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಶಿವರಾಮ ಪೂಜಾರಿ ಯಡ್ತರೆ ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು.ಗೋಳಿಹೊಳೆ ಶಾಖೆಯ ಶಾಖಾ ವ್ಯವಸ್ಥಾಪಕ ಶಿವರಾಮ ಕೊಠಾರಿ ವಂದಿಸಿದರು.
News/Giri shiruru
pic/Shabari studio yadthare