ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸಿ ಪ್ರಸ್ತುತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡ ಸುಜಾತ ಎಂ.ರವರ ಬೀಳ್ಕೋಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ,ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ,ಉಪಪ್ರಾಂಶುಪಾಲೆ ಜಯಂತಿ ಶೆಟ್ಟಿ,ಉಪನ್ಯಾಸಕಿ ಡಾ.ಸೋಮಯ್ಯ ನಾಜ್ ಉಪಸ್ಥಿತರಿದ್ದರು.

ಶಿಕ್ಷಕಿ ಉಮಾ ಸ್ವಾಗತಿಸಿದರು.ಉಪನ್ಯಾಸಕ ಮಂಜುನಾಥ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.ಸೌಜನ್ಯ ವಂದಿಸಿದರು.

 

Leave a Reply

Your email address will not be published. Required fields are marked *

4 − two =