ಬೈಂದೂರು: ಉಪ್ಪುಂದದ ಇತಿಹಾಸ ಪ್ರಸಿದ್ದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಮನ್ಮಹಾರಥೋತ್ಸವ ’ಉಪ್ಪುಂದ ಕೊಡಿಹಬ್ಬ’ ಶನಿವಾರ. ಸಡಗರ ಸಂಭ್ರಮದಿಂದ ಜರುಗಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಶೆಟ್ಟಿ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್. ಇವರ ಉಸ್ತುವಾರಿ ಹಾಗೂ ತಂತ್ರಿ ಶ್ರೀನಿವಾಸ ಅಡಿಗ ಮಾರ್ಗದರ್ಶನದಲ್ಲಿ ಉಪ್ಪುಂದ ದೇವಳದ ಪ್ರಧಾನ ಅರ್ಚಕ ಪ್ರಕಾಶ ಉಡುಪ ನೇತೃತ್ವದ ವೈದಿಕ ತಂಡದವರಿಂದ ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಭೂತಬಲಿ, ರಥ ಶುದ್ಧಿಹೋಮ ನಂತರ ರಥಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಮಧ್ಯಾಹ್ನ ದೇವಳದ ಸಭಾಭವನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.ಸಂಜೆ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಿಯ ಮನ್ಮಹಾರಥೋತ್ಸವ ನಡೆಯಲಿದೆ.

default
default
default
default
default

ಕರಾವಳಿಯ ಅತಿದೊಡ್ಡ ಜಾತ್ರೆ; ಕರಾವಳಿಯ ಅತಿದೊಡ್ಡ ಜಾತ್ರೆ ಆಗಿರುವ ಕೋಟೇಶ್ವರದ ಕೊಡಿಹಬ್ಬ ಮತ್ತು ಉಪುಂದ ಕೊಡಿಹಬ್ಬ ಈ ಬಾರಿ ಹಿಂದೆ ಮುಂದೆ ಆಗಿದೆ. ಕೋಟೇಶ್ವರ ಕೊಡಿಹಬ್ಬದ ಮರುದಿನವೇ ಉಪ್ಪುಂದ ಕೊಡಿಹಬ್ಬ ನಡೆಯುವುದು ವಾಡಿಕೆ. ಆದರೆ ಈ ಬಾರಿ ಉಪ್ಪುಂದ ಕೊಡಿಹಬ್ಬ ಮೊದಲಿಗೆ ಬಂದಿದ್ದು ತಿಂಗಳ ಬಳಿಕ ಕೋಟೇಶ್ವರ ಕೊಡಿಹಬ್ಬ ನಡೆಯಲಿದೆ.35 ವರ್ಷಗಳಿಗೊಮ್ಮೆ ಈ ರೀತಿ ಅಪರೂಪದ ವಿದ್ಯಾಮಾನ ಘಟಿಸುತ್ತದೆ ಎಂದು ಹಿರಿಯ ಅರ್ಚಕರು ತಿಳಿಸಿದರು.ಉಪ್ಪುಂದ ಕೊಡಿಹಬ್ಬವು ಕುಡಿ ಅರಳಿಸುವ ಹಬ್ಬ ಎಂದೇ ಖ್ಯಾತಿವೆತ್ತಿದೆ. ಈ ಜಾತ್ರೆಯಲ್ಲಿ ಅಸಂಖ್ಯ ಭಕ್ತರು ದೇವರ ಪ್ರೀತ್ಯಾರ್ಥ ಕಬ್ಬು ಖರೀದಿಸಿ ಮನೆಗೆ ಕೊಂಡೊಯ್ಯುವ ಪದ್ದತಿ ನಡೆದುಕೊಂಡು ಬಂದಿದೆ. ಜಾತ್ರೆಗೆ ಹೋಗುವವರು ಕಬ್ಬು (ಕೊಡಿ) ತರುವುದು ಶುಭ. ಅದರಲ್ಲಿ ನವದಂಪತಿಗಳು ಕೊಡಿ ತರುವ ಸಂಪ್ರದಾಯ ಇಂದಿಗೂ ಚಾಲ್ತಿಯಲ್ಲಿದೆ.

 

 

 

Leave a Reply

Your email address will not be published.

7 + 2 =