ಬೈಂದೂರು: ದಕ್ಷಿಣ ಭಾರತದ ಪ್ರಸಿದ್ದ ಯಾತ್ರಾ ಸ್ಥಳ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಜನಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಇಂದು ಕಾಲಿವುಡ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಆಗಮಿಸಿ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ.ಬಾಲಿವುಡ್ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಸ್ಟಾರ್ ದಂಪತಿಗಳಾಗಿದ್ದಾರೆ..ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಸೂರ್ಯ ಹಾಗೂ ಜ್ಯೋತಿಕಾಗೆ ಕರ್ನಾಟಕದಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ.