ಶಿರೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ಮೂರು ಲಕ್ಷ ರೂಪಾಯಿ ಮೊತ್ತದ ಸಹಾಯಧನವನ್ನು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿರೂರು ಪೇಟೆ ಶ್ರೀ ಶಾಂತಾನಂದ ಆಶ್ರಮಕ್ಕೆ ದೇಣಿಗೆಯಾಗಿ ನೀಡಲಾಯಿತು.
ಶಾಂತಾನಂದ ಆಶ್ರಮದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ ರಾವ್ ರವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಶಾಂತಾನಂದ ಶೆಟ್ಟಿ,ಯೋಜನಾಧಿಕಾರಿ ಕೆ. ವಿನಾಯಕ ಪೈ,ಧ.ಗ್ರಾ.ಯೋಜನೆ ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ, ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಉದ್ಯಮಿ ಎಸ್.ಪ್ರಕಾಶ ಪ್ರಭು,ರಾಮ ಮೇಸ್ತ,ರಘುರಾಮ ಕೆ.ಪೂಜಾರಿ,ಗ್ರಾ.ಪಂ ಸದಸ್ಯ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ನಾಗಯ್ಯ ಶೆಟ್ಟಿ, ವಲಯ ಮೇಲ್ವಿಚಾರಕ ರಾಮ ಎನ್,ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು,ಜನಜಾಗೃತಿ ವೇದಿಕೆ ಸದಸ್ಯರು,ಶೌರ್ಯ ವಿಪತ್ತು ಘಟಕದ ಸದಸ್ಯರು,ಮೇಲ್ವಿಚಾರಕರು,ಸೇವಾ ಪ್ರತಿನಿಽಗಳು,ಒಕ್ಕೂಟದ ಸದಸ್ಯರು ಹಾಗೂ ಭಕ್ತಾಽಗಳು ಹಾಜರಿದ್ದರು.