ಶಿರೂರು: ಪಿ.ಎಂ.ಶ್ರೀ  ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2024ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಡಿ.28 ರಂದು ನಡೆಯಲಿದೆ.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣ ಪೂಜಾರಿ ಸಭಾಧ್ಯಕ್ಷತೆ ವಹಿಸಲಿದ್ದು.ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಶಾಲಾ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಪ್ರತಿಭಾ ಪುರಸ್ಕಾರ ವಿತರಿಸಲಿದ್ದು ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿದ್ಯ ಹಾಗೂ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣಲೀಲೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಶಾಲೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ;  ಪಿ.ಎಂ.ಶ್ರೀ  ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2024ನೇ ಸಾಲಿನ ಹಳೆ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಡಿ.22 ರಂದು ಪೂರ್ವಾಹ್ನ 9 ಗಂಟೆಗೆ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಕ್ರೀಡಾಕೂಟದಲ್ಲಿ ಬಾಗವಹಿಸುವಂತೆ ಶಾಲೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

nine − 8 =