ಶಿರೂರು: ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2024ನೇ ಸಾಲಿನ ಹಳೆ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಶಾಲೆಯ ಮೈದಾನದಲ್ಲಿ ನಡೆಯಿತು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣ ಪೂಜಾರಿ,ಶಾಲಾ ಮುಖ್ಯ ಶಿಕ್ಷಕ ಶಂಕರ ಶಿರೂರು,ಪತ್ರಕರ್ತ ಗಿರೀಶ್ ಶಿರೂರು,ಶಂಕರ ಎನ್.ಬಿಲ್ಲವ,ಮಾದವ ಬಿಲ್ಲವ, ಹಳೆ ವಿದ್ಯಾರ್ಥಿ ಸಂಘದ ರವೀಂದ್ರ ಶೇಟ್,ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು,ಸರ್ವ ಸದಸ್ಯರು,ಪಾಲಕ ಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.









ಶಿಕ್ಷಕ ಗೋವಿಂದ ಎಂ.ಸ್ವಾಗತಿಸಿದರು.ಶಿಕ್ಷಕ ಸಿ.ಎನ್.ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕಿ ಜಯಶ್ರೀ ಪೈ ವಂದಿಸಿದರು.
ವರದಿ/ಚಿತ್ರ: ಗಿರಿ ಶಿರೂರು