ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಯಾಗಬೇಕಾದರೆ ಶಿಕ್ಷಕರ ಕ್ರಿಯಾಶೀಲತೆ,ಪಾಲಕರ ಆಸಕ್ತಿ ಮತ್ತು ಸಾರ್ವಜನಿಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ.ಗ್ರಾಮೀಣ ಭಾಗದಲ್ಲಿ ಸಹಜವಾಗಿ ದೊರೆಯುವ ಅವಕಾಶಗಳನ್ನು ಪೂರಕವಾಗಿ ಉಪಯೋಗಿಸಿಕೊಂಡಾಗ ಸರಕಾರಿ ಶಾಲೆಗಳನ್ನು ಅತ್ಯುತ್ತಮ ಶೈಕ್ಷಣಿಕ ವಾತಾವರಣ ನೀಡಬಹುವುದಾಗಿದೆ.ಶಿರೂರು ಪಿ.ಎಂ.ಶ್ರೀ ಮಾದರಿ ಶಾಲೆಯ ಶೈಕ್ಷಣಿಕ ಪ್ರಗತಿ ಇತರ ಶಾಲೆಗಳಿಗೆ ಮಾದರಿಯಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು ಅವರು ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2024-25ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಶಾಲಾ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ ನೈಜ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸರಕಾರಿ ಶಾಲೆಯಲ್ಲಿ ಕಾಣಲು ಸಾಧ್ಯ.ಆಂಗ್ಲ ಭಾಷೆಯ ಆಸಕ್ತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸದಂತೆ ಗಮನಹರಿಸಬೇಕಾದ ಜವಬ್ದಾರಿ ಶಿಕ್ಷಕರದ್ದಾಗಿದೆ.ಶಾಲಾ ವಾರ್ಷಿಕೋತ್ಸವದಲ್ಲಿ ಕೇವಲ ಸಾಂಸ್ಕ್ರತಿಕ ವೇದಿಕೆ ಮಾತ್ರವಾಗದೆ ಶಾಲೆಯ ಪ್ರಗತಿಯನ್ನು ಬಿಂಬಿಸುವ ವೇದಿಕೆಯಾಗಬೇಕಿದೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಮಾತ್ರ ಶಾಲೆಯ ಕುಂದುಕೊರತೆಗಳನ್ನು ಗಮನಹರಿಸಲು ಸಾಧ್ಯವಾಗುತ್ತದೆ.ಶಿರೂರು ಮಾದರಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಇತರ ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರೇರಣೆಯಾಗಿದೆ ಎಂದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಪ್ರತಿಭಾ ಪುರಸ್ಕಾರ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಶಿರೂರು ಗ್ರಾ.ಪಂ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್,ಗ್ರಾ.ಪಂ ಸದಸ್ಯರಾದ ಉಷಾ ಜನಾರ್ಧನ ಗಾಣಿಗ,ಪ್ರೇಮಾ ಮೊಗೇರ್,ಉದಯ ಪೂಜಾರಿ,ಪ್ರಸನ್ನ ಕುಮಾರ್ ಶೆಟ್ಟಿ,ಪದ್ಮಾವತಿ ಮೊಗೇರ್,ಸರಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ,ಎಸ್.ಡಿ.ಸಿ ಅಧ್ಯಕ್ಷ ಚಿಕ್ಕು ಪೂಜಾರಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ,ಉದ್ಯಮಿ ಪ್ರಸಾದ ಪ್ರಭು,ಗಣಪ್ಪಯ್ಯ ಶೆಟ್ಟಿ ,ವಿದ್ಯಾರ್ಥಿ ನಾಯಕ ಮನೋಹರ್,ನಾಯಕಿ ಅನ್ವಿತಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಶಿಕ್ಷಕರನ್ನು, ದಾನಿಗಳನ್ನು ಸಮ್ಮಾನಿಸಲಾಯಿತು.

ಶಾಲೆಯ ಹಳೆ ವಿದ್ಯಾರ್ಥಿ ಅರುಣ್ ಕುಮಾರ್ ಶೆಟ್ಟಿ ಸ್ವಸ್ತಿವಾಚನಗೈದರು.ಶಾಲಾ ಮುಖ್ಯ ಶಿಕ್ಷಕ ಶಂಕರ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಸಿ.ಎನ್.ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.ಗೋವಿಂದ ಟೀಚರ್ ವಂದಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಎ.ವನ್.ಸ್ಟುಡಿಯೋ ಶಿರೂರು