ಬೈಂದೂರು; ಆಲೂರು ವೆಂಕಟರಾಯರ ಕನ್ನಡ ಭಾಷಾ ಓಲಂಪಿಯಾಡ್ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಹೈಸ್ಕೂಲ್ ವಿಭಾಗದ ಎಂಟನೇ ತರಗತಿಗೆ ನಡೆಸಲಾದ ಪರೀಕ್ಷೆಯಲ್ಲಿ ಬೈಂದೂರು ವಲಯದ ಗ್ರಾಮೀಣ ಪ್ರದೇಶವಾದ ಮುಲ್ಲಿಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ವಂಶಿಕ ಮರಾಠಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾಳೆ. ಈಕೆಗೆ ಶಿಕ್ಷಕ ವೃಂದ ಮತ್ತು ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.