ಬೈಂದೂರು; ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಕಾರದೊಂದಿಗೆ ಬೈಂದೂರು ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ  ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆ ಉದ್ಘಾಟನಾ ಕಾರ್ಯಕ್ರಮ ಅಂಜಲಿ ಆಸ್ಪತ್ರೆ ಆವರಣ ಬೈಂದೂರಿನಲ್ಲಿ ನಡೆಯಿತು.

ನಾಕಟ್ಟೆ ತಿಮ್ಮಪ್ಪ ಶೆಟ್ಟಿ  ತುರ್ತು ಆರೈಕೆ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿ  ಬೈಂದೂರು ಮುಂತಾದ ಗ್ರಾಮೀಣ ಪ್ರದೇಶಗಳಲ್ಲಿ ತ್ವರಿತ, ವಿಶ್ವಾಸಾರ್ಹ ವೈದ್ಯಕೀಯ ಆರೈಕೆಯ ಅಗತ್ಯವನ್ನು ಎತ್ತಿ ತೋರಿಸಿದರು.ಈ ಹೊಸ ಸೌಲಭ್ಯವು ಜೀವಗಳನ್ನು ಉಳಿಸುವಲ್ಲಿ ಮತ್ತು ಅಗತ್ಯ ತುರ್ತು ಸೇವೆಗಳನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೀರ್ಘ ಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ವಿಶೇಷ ಆರೈಕೆ ನೀಡಲಾಗುತ್ತದೆ. ಈ ಪ್ರದೇಶಕ್ಕೆ ವಿಶ್ವ ದರ್ಜೆಯ ಆರೋಗ್ಯ ಸೇವೆಗಳನ್ನು ತರುವ ಪ್ರಯತ್ನಗಳನ್ನು ಶ್ಲಾಘಿಸಿದರು.

ಮುಖ್ಯ ಅತಿಥಿಗಳಾಗಿ ಮಾಹೆ ಬೋಧನಾ ಆಸ್ಪತ್ರೆಯ ಸಿಒಒ ಡಾ. ಆನಂದ್ ವೇಣುಗೋಪಾಲ್,ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಽಕ್ಷಕ ಡಾ. ಅವಿನಾಶ್ ಶೆಟ್ಟಿ, ಅಂಜಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಅಣ್ಣಪ್ಪ ಶೆಟ್ಟಿ, ಡಾ ಆನಂದ್  ವೇಣುಗೋಪಾಲ್, ಮಣಿಪಾಲದ ಮಾರ್ಕೆಟಿಂಗ್ ಮ್ಯಾನೇಜರ್ ಮೋಹನ್ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ,ಸಮೃದ್ದ ಬೈಂದೂರು ಅಧ್ಯಕ್ಷ ಬಿ.ಎಸ್.ಸುರೇಶ ಶೆಟ್ಟಿ,ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ಕೆ,ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಉಪಸ್ಥಿತರಿದ್ದರು.

ರಾಜೇಶ್ ರಾವ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Pic: Suresh Makodi

 

 

Leave a Reply

Your email address will not be published. Required fields are marked *

four × four =