ಶಿರೂರು: ಬಂಟರಯಾನೆ ನಾಡವರ ಸಂಘ ಶಿರೂರು ಮತ್ತು ಯುವ ಬಂಟರ ಸಂಘ ಶಿರೂರು,ಬೆಂಗಳೂರು ಬಂಟರ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.)ಇದರ ಸಹಯೋಗದೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಶಿರೂರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಡಾ.ಯು.ಮಾಧವ ಶೆಟ್ಟಿ ಬಳ್ಳಾರಿ ಕ್ಲಿನಿಕ್ ಗಂಗಾವತಿ ವಿದ್ಯಾರ್ಥಿವೇತನ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿರೂರು ಬಂಟರ ಸಂಘ ಕಳೆದ ಹಲವು ವರ್ಷಗಳಿಂದ ಶಿಕ್ಷಣ,ಸಾಹಿತ್ಯ,ಆಸಕ್ತರಿಗೆ ನೆರವು ನೀಡುವುದರ ಮೂಲಕ ವಿವಿಧ ಸಂಘಗಳಿಗೆ ಮಾದರಿ ಸಂಘವಾಗಿದೆ. ಸಮುದಾಯ,ಸಂಘಟನೆಗಳು ಶೈಕ್ಷಣಿಕ,ಸಾಮಾಜಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮುತುವರ್ಜಿ ವಹಿಸಿ ಸಮಾಜದ ಅಶಕ್ತರಿಗೆ ನೆರವಾದಾಗ ಬಡ ಕುಟುಂಬಗಳು ಮುಖ್ಯವಾಹಿನಿಯಲ್ಲಿ ಗುರುತಿಸಲು ಸಾದ್ಯವಾಗುತ್ತದೆ.ಸಮಾಜಮುಖಿ ಕಾರ್ಯಕ್ರಮದ ಮೂಲಕ ಸಂಘಟಿತರಾದಾಗ ಸಮುದಾಯಕ್ಕೆ ಶಕ್ತಿ ದೊರೆಯುತ್ತದೆ ಎಂದರು.

ಶಿರೂರು ಬಂಟರ ಸಂಘದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಬೆಟ್ಟಿನಮನೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿ.ಎ ಅಶೋಕ ಕುಮಾರ್ ಶೆಟ್ಟಿ, ಉಮೇಶ್ ಕುಮಾರ್ ಶೆಟ್ಟಿ ಚೆರಮನ್ ವಿದ್ಯಾರ್ಥಿವೇತನ ಸಮಿತಿ ಬಂಟರ ಸಂಘ ಬೆಂಗಳೂರು,ಬೈಂದೂರು ಬಂಟರಯಾನೆ ನಾಡವರ ಸಂಘದ ಅಧ್ಯಕ್ಷ ಸಾಲಗದ್ದೆ ಶಶಿಧರ ಶೆಟ್ಟಿ, ಶಿರೂರು ಯುವ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಶೆಟ್ಟಿ,ದಾಸನಾಡಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗಯ್ಯ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಿ.ಎ ಪರೀಕ್ಷೆಯಲ್ಲಿ ಉತ್ತಿರ್ಣರಾದ ಶಿರೂರಿನ ಶಬರೀಶ ಶೆಟ್ಟಿ ಯವರನ್ನು ಗೌರವಿಸಲಾಯಿತು.ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಬಂಟ ಸಮುದಾಯದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು ಹಾಗೂ ಬಂಟ ಸಮಯುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಶಿರೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಸತೀಶ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು.ದಾಮೋಧರ ಶೆಟ್ಟಿ ಸಂಘದ ವಾರ್ಷಿಕ ವರದಿ ವಾಚಿಸಿದರು.ಎಚ್.ಚಂದ್ರಶೇಖರ ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು.ಸಂಘದ ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ವಿದ್ಯಾರ್ಥಿವೇತನ ಪಟ್ಟಿ ವಾಚಿಸಿದರು.ಶಾಂತಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ರಾಘವೇಂದ್ರ ಶೆಟ್ಟಿ ವಂದಿಸಿದರು.

 

Leave a Reply

Your email address will not be published. Required fields are marked *

thirteen + 16 =