ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರು ಶಾಲೆಗೆ ಡಿಜಿಟಲ್ ಕ್ಲಾಸ್ ಉದ್ಘಾಟನಾ ಸಮಾರಂಭವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿ ಶುಭ ಹಾರೈಸಿದರು.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಶಾಲೆಯ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮತ್ತು ಇತರೆ ಕೊಡುಗೆ ನೀಡುತ್ತಾ ಬರುತ್ತಿದ್ದೇವೆ.ಇಂದು ಬಿಜೂರು ಶಾಲೆಗೆ ಉನ್ನತ ಮಟ್ಟದ ಡಿಜಿಟಲ್ ಕ್ಲಾಸ್ ಕೊಡುಗೆ ನೀಡಿದ್ದೇವೆ.ವಿದ್ಯಾರ್ಥಿಗಳು ಡಿಜಿಟಲ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ ಎಂದರು.
ಮುಖ್ಯ ಅತಿಥಿಗಳಾಗಿ ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷೆ ಶಾರದಾ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ದೇವಾಡಿಗ, ರಾಜೇಂದ್ರ ಬಿಜೂರು,ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ, ಖಂಬದಕೋಣೆ ಸಂದೀಪ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವೇಶ್ವರ ಅಡಿಗ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದೀಶ್ ದೇವಾಡಿಗ, ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಬಿಜೂರು, ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶಾಖಾ ವ್ಯವಸ್ಥಾಪಕ ನಾಗರಾಜ ಪಿ.ಯಡ್ತರೆ ಉಪಸ್ಥಿತರಿದ್ದರು.








ಶಿಕ್ಷಕಿ ಕವಿತಾ ಸ್ವಾಗತಿಸಿದರು.ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.ಅಶ್ವಿನಿ ವಂದಿಸಿದರು.
ವರದಿ/ಚಿತ್ರ: ಗಿರಿ ಶಿರೂರು