ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಕುವಿನಲ್ಲಿರುವ ಜನಾರ್ಧನ ಗಾಣಿಗ ಇವರ ಮನೆಗೆ ಬೀಗ ಮುರಿದು ಕಪಾಟಿನಲ್ಲಿರಿಸಿದ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಅಭರಣಗಳನ್ನು ನಗದು ಹಣ ಮತ್ತು ಲ್ಯಾಪ್ಟಾಪ್ ಕಳವು ಮಾಡಿಕೊಂಡು ಹೋಗಿದ್ದ ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.ಬೈಂದೂರು ವೃತ್ತ ನಿರೀಕ್ಷಕರಾದ ಸವಿತ್ರ ತೇಜ ರವರ ನೇತ್ರತ್ವದಲ್ಲಿ ಬೈಂದೂರು ಪೊಲೀಸ್ ಠಾಣೆಯ ಪಿ.ಎಸ್‌ಐ. ಮತ್ತು ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿಗಳಾದ ಯತಿರಾಜ್ ಜಿ ಉಪ್ಪುಂದ, ಮಹೇಶ್ ಯಳಜಿತ್ ಹಾಗೂ ಕಾರ್ತಿಕ್ ನಾಗೂರು ಎಂಬವರನ್ನು ಪತ್ತೆ ಮಾಡಿ ಆರೋಪಿಗಳು ಕಳವು ಮಾಡಿರುವ ಚಿನ್ನಾಭರಣ, ಲ್ಯಾಪ್‌ಟಾಪ್ ಮತ್ತು ಆರೋಪಿಗಳು ಕೃತ್ಯಕ್ಕೆ ಬಳಸಿಕೊಂಡಿರುವ ಮೊಬೈಲ್‌ಗಳು ಸೇರಿ ಅಂದಾಜು ಸುಮಾರು 3 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಐ.ಪಿ.ಎಸ್.ರವರ ಅದೇಶದ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಮತ್ತು ಪರಮೇಶ್ವರ ಹೆಗಡೆ ಮತ್ತು ಕುಂದಾಪುರ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಮಾರ್ಗದರ್ಶನದಲ್ಲಿ, ಬೈಂದೂರು ವೃತ್ತ ನಿರೀಕ್ಷಕ ಸವಿತೃ ತೇಜ,ಬೈಂದೂರು ಠಾಣೆಯ ಪಿ.ಎಸ್.ಐ ತಿಮ್ಮೇಶ್ ಬಿ.ಎನ್ ಮತ್ತು ನವೀನ ಪಿ. ಬೋರಕರ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯಾಚರಣೆಯಲ್ಲಿ ಬೈಂದೂರು ಠಾಣೆಯ ಸಿಬ್ಬಂದಿಯವರಾದ ಚಿದಾನಂದ, ಮಾಳಪ್ಪ ಪರಯ್ಯ ಮಠಪತಿ, ನವೀನ್ ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿಯವರಾದ ರವೀಂದ್ರ, ಅಶೋಕ ರಾಥೋಡ್, ಶಂಕರ ಮತ್ತು ಚಾಲಕ ಚಂದ್ರ ಯಡ್ತರೆ,ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ದಿನೇಶ್ ರವರು ಸಹಕರಿಸಿರುತ್ತಾರೆ.