ಶಿರೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ಶಿರೂರು ಗ್ರಾಮದ ಮೇಲ್ಪಂಕ್ತಿ ಶ್ರೀ ಎರಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರದಿಂದ ಎರಡು ಲಕ್ಷ ರೂಪಾಯಿ ಮೊತ್ತದ ಡಿ.ಡಿಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ,ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಕೃಷ್ಣ ಪೂಜಾರಿ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ,ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಾಗಪ್ಪಯ್ಯ ಆಚಾರ್ ಕೋಣೆಮನೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಬಾಸ್ಕರ್ ಆಚಾರ್ಯ ಕೋಣೆಮನೆ,ಎರಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಲಕ್ಷ್ಮೀ ನಾರಾಯಣ್ ಭಟ್, ಉತ್ಸವ ಸಮಿತಿಯ ಅಧ್ಯಕ್ಷ ಶಾಂತಾನದ ಆಚಾರ್ಯ,ಶಿರೂರು ಬಿ ಒಕ್ಕೂಟದ ಜೊತೆ ಕಾರ್ಯದರ್ಶಿ ರವಿಕಾಂತ್ ಆಚಾರ್ಯ,ರಾಮಾದೇವಿ ಆಚಾರ್ಯ,ವಲಯದ ಮೇಲ್ವಿಚಾರಕ ರಾಮ ಎನ್,ವ್ಯವಸ್ಥಾಪನ ಸಮಿತಿ ಸದಸ್ಯರು,ಜೀರ್ಣೋದ್ದಾರ ಸಮಿತಿ ಸದಸ್ಯರು, ಸೇವಾಪ್ರತಿಧಿಗಳು ಉಪಸ್ಥಿತರಿದ್ದರು.