ಬೈಂದೂರು; ಮಹೋತೊಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ಶುಕ್ರವಾರ ಸಂಭ್ರಮ ಸಡಗರದಿಂದ ನಡೆಯಿತು.ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.ಸಂಜೆ ಸಂಭ್ರಮ ಸಡಗರದಿಂದ ಮನ್ಮಹಾರಥೋತ್ಸವ ನಡೆಯಿತು.ಸಾವಿರಾರು ಭಕ್ತರು ಆಗಮಿಸಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ಬೈಂದೂರು ವೃತ್ತ ನಿರೀಕ್ಷಕ ಸವಿತ್ರತೇಜ್ ಮಾರ್ಗದರ್ಶನದಲ್ಲಿ ಪಿಎಸ್‌ಐ ತಿಮ್ಮೇಶ್ ಬಿ. ಎನ್. ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಈ ಸಂಧರ್ಭದಲ್ಲಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಬಿಲ್ಲವ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಸದಸ್ಯರಾದ ರಾಜೇಶ ಐತಾಳ್, ಬಿ. ದೊಟ್ಟಯ್ಯ ಪೂಜಾರಿ, ಪರಮೇಶ್ವರ ಪಟ್ವಾಲ್, ಪ್ರಶಾಂತ ಕುಮಾರ್ ಶೆಟ್ಟಿ, ಜಯರಾಮ ಯಡ್ತರೆ, ವಸಂತ ಕುಮಾರ್ ಶೆಟ್ಟಿ, ಇಂದಿರಾ ಕೊಠಾರಿ, ಶಾಂತಾ ಆಚಾರ್ಯ, ಧಾರ್ಮಿಕ ಮುಖಂಡರು, ಸ್ಥಳೀಯ ಜನಪ್ರತಿನಿಽಗಳು,ದೇವಸ್ಥಾನದ ಸಿಬಂದಿಗಳು ಹಾಗೂ ಅರ್ಚಕರು ಹಾಜರಿದ್ದರು.