ಬೈಂದೂರು: ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಬಿಜೂರು ಇದರ ಶಿಲಾನ್ಯಾಸ ಸಮಾರಂಭ ಮೇ 9 ರಂದು ಮದ್ಯಾಹ್ನ 12:5ಕ್ಕೆ ನಡೆಯಲಿದೆ.ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶಿಲಾನ್ಯಾಸಗೈಯಲಿದ್ದಾರೆ. ಶ್ರೀ ಶ್ರೀ ಶ್ರೀ ಅವಧೂತ ವಿನಯ ಗುರೂಜಿ ಗೌರಿಗದ್ದೆ ಹಾಗೂ ಮಹಾಕಾಳಿ ಮಹಾಸಂಸ್ಥಾನದ ಪೀಠಾಧಿಪತಿ ಅರುಣಾನಂದ ತೀರ್ಥ ಸ್ವಾಮೀಜಿ ದಿವ್ಯ ಉಪಸ್ಥಿತರಿರಲಿದ್ದಾರೆ.
ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.