ಬೈಂದೂರು: ಕರಾವಳಿ ಹಾಗೂ ಮಲೆನಾಡು ಬಹಳ ಹಿಂದಿನಿಂದಲೂ ಅನನ್ಯ ಬಾಂಧವ್ಯ ಹೊಂದಿದೆ.ಬೈಂದೂರು ವಿಧಾನಸಭಾ ಕ್ಷೇತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಮೂಲಕ ಇನ್ನಷ್ಟು ಗಟ್ಟಿಗೊಳಿಸಿದೆ.ದೇವಸ್ಥಾನಗಳ ತವರೂರು ಕರಾವಳಿ ಜಿಲ್ಲೆಯಾಗಿದೆ.ಶಿವಮೊಗ್ಗ ಜಿಲ್ಲೆ ಹಾಗೂ ಬೈಂದೂರು ನಡುವಿನ ರಸ್ತೆಗಳನ್ನು ಅಭಿವೃದ್ದಿಪಡಿಸಿ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಪರ್ಕ ಬೆಸೆಯುವ ಮೂಲಕ ಹತ್ತಿರವಾಗಿದೆ.ಐತಿಹಾಸಿಕ ಯೋಜನೆಗಳಾದ ಸಿಗಂದೂರು ಸೇತುವೆ, ಶರಾವತಿ ಸೇತುವೆಗಳು ಅತ್ಯಂತ ಪ್ರಯಾಸದ ಪ್ರಯಾಣವನ್ನು ಸಲೀಸಾಗಿಸುವ ಮಹತ್ವಕಾಂಕ್ಷೆ ಯೋಜನೆಯಾಗಿದೆ.ಈ ಮೂಲಕ ಮಲೆನಾಡು ಹಾಗೂ ಕರಾವಳಿ ನಡುವಿನ ಬಾಂಧವ್ಯ ವೃದ್ದಿಸುವ ಪೂರಕ ಅಭಿವೃದ್ದಿಯಾಗಲಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಹೇಳಿದರು ಅವರು ಉಪ್ಪುಂದದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಯಡ್ಯೂರಪ್ಪರವರ ದೂರದೃಷ್ಟಿತ್ವದ ಚಿಂತನೆಯಿಂದ ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ದಿ ಯೋಜನೆ ಹಲವು ಯೋಜನೆಗಳು ದೊರೆತಿದೆ.ಸಿದ್ದಾಪುರ ಏತ ನೀರಾವರಿ ಯೋಜನೆ,ಗ್ರಾಮೀಣ ಭಾಗದ ನೆಟ್‌ವರ್ಕ್ ಸೌಲಭ್ಯ,ರಸ್ತೆ,ಸೇತುವೆ ಸೇರಿದಂತೆ ಮಹತ್ವಕಾಂಕ್ಷೆಯ ಯೋಜನೆಗಳು ಸಾಕಾರಗೊಂಡಿದೆ.ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬೈಂದೂರು ಕ್ಷೇತ್ರದ ಮರವಂತೆ,ವತ್ತಿನೆಣೆ ಪ್ರದೇಶಕ್ಕೆ ಬೇಟಿ ನೀಡಿ ಇಲ್ಲಿನ ಪ್ರವಾಸೋಧ್ಯಮ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವ ಭರವಸೆಯಿದೆ ಎಂದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ,ಉದ್ಯಮಿ ಗೋವಿಂದ ಬಾಬು ಪೂಜಾರಿ,ಸುರೇಶ ಶೆಟ್ಟಿ ಉಪ್ಪುಂದ,ಯುವ ಮುಖಂಡ ಶರತ್ ಕುಮಾರ್ ಶೆಟ್ಟಿ ಉಪ್ಪುಂದ ಹಾಜರಿದ್ದರು.