ಬೈಂದೂರು: ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ 2025 ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪುಂದ ಇಲ್ಲಿನ ಶಿಕ್ಷಕಿ ದೀಪಾ ಮಂಜುನಾಥ ಬಿಲ್ಲವ ಇವರು ಪವರ್ ಲಿಪ್ಟಿಂಗ್ ಮತ್ತು ವೇಟ್ ಲಿಪ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಮೇಘಾಲಯದಲ್ಲಿನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.