ಶಿರೂರು: ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿ ಕಾಪ್ಸಿ ಮಹ್ಮದ್ ಮೀರಾ ನ್ಯೂ ಕಾಲೋನಿ ಕೆಸರಕೋಡಿ ಇವರ ಮನೆಯ ಮೇಲ್ಚಾವಣೆ ಕುಸಿದು ಸುಮಾರು 1 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಶಿರೂರು ಗ್ರಾ.ಪಂ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್,ಗ್ರಾ.ಪಂ ಅಭಿವೃದ್ದಿ ಅಧಿಕಾರಿ ರಾಜೇಂದ್ರ ಶೆಟ್ಟಿ,ಗ್ರಾಮ ಲೆಕ್ಕಾಧಿಕಾರಿ ವಿಜಯ ಕುಮಾರ್,ಸ್ಥಳೀಯ ಗ್ರಾ.ಪಂ ಸದಸ್ಯ ಮುಕ್ರಿ ಮಹ್ಮದ್ ಅಲ್ತಾಫ್ ಬೇಟಿ ನೀಡಿ ಪರಿಶೀಲನೆ ನಡೆಸಿದರು..