ಶಿರೂರು: ಕಳೆದ ಹಲವು ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿಗೊಂಡ ರಹೀಮಾ ಶಿರೂರು,ಬಾತಿಯ ಹಬೀಬಾ ಹಾಗೂ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಬರೀಶ್ ರವರ ಬೀಳ್ಕೋಡುಗೆ ಸಮಾರಂಭ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬಂದಿ ನಾಗರಾಜ್,ಅಶ್ವಿನಿ, ಜಾಯ್ಲಿನ್,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.