ಬೈಂದೂರು: ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಬಿಜೂರಿನ ಮುಖಮಂಟಪದ ಬಳಿ ನಡೆದಿದೆ.ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದು ಮಳೆಯ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುನುಜ್ಜಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.
PHOTO: Kishor shashihithlu