ಬೈಂದೂರು:ಶಿರೂರು ವತ್ತಿನೆಣೆ ಸಮೀಪದ ಗ್ರೀನ್ ವ್ಯಾಲಿ ಶಾಲೆಯ ಇಳಿಜಾರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿಸಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ. ಡಿಕ್ಕಿಯ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.