ಬೈಂದೂರು: ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಮೂಲಭೂತ ಸೌಕರ್ಯವನ್ನು ನಮ್ಮ ಟ್ರಸ್ಟ್ ವತಿಯಿಂದ ಉಚಿತವಾಗಿ ಒದಗಿಸಲಾಗುತ್ತದೆ. ಈ ಶಾಲೆಯನ್ನು ಶೈಕ್ಷಣಿಕವಾಗಿ ಭೌತಿಕವಾಗಿ ಅಭಿವೃದ್ಧಿ ಪಡಿಸಲು ಟ್ರಸ್ಟ್ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಡಾ ಗೋವಿಂದ ಬಾಬು ಪೂಜಾರಿ ಹೇಳಿದರು ಅವರು ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ- ಪೋಷಕ ಸಭೆಯಲ್ಲಿ ಭಾಗವಹಿಸಿ ಟ್ರಸ್ಟ್ ವತಿಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನೋಟ್ಸ್ ಪುಸ್ತಕ ಮತ್ತು ಆಂಗ್ಲ ಮಾಧ್ಯಮ ಪುಸ್ತಕವನ್ನು ವಿತರಿಸಿ ಮಾತನಾಡಿ ಬಿಜೂರು ಸರ್ಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ್ದು, ಯಾವುದೇ ಖಾಸಗಿ ಶಾಲೆಯ ವ್ಯವಸ್ಥೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಒಂದೊಂದಾಗಿ ಪೂರ್ಣಗೊಳಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರ್ಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದ್ದು, ಶಾಲೆಯ ಉಳಿವಿಗೆ ಶಿಕ್ಷಣಾಭಿಮಾನಿಗಳು ಮತ್ತು ದಾನಿಗಳು ಸಹಕಾರ ನೀಡುವುದು ಇಂದಿನ ಅಗತ್ಯ ಎಂದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಶಾರದಾ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಬಿಜೂರು,ಟ್ರಸ್ಟ್ ಸಂಯೋಜಕ ನಾಗರಾಜ್ ಪಿ., ಪೋಷಕ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ಎಸ್. ಬಿಜೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವ ಶಿಕ್ಷಕಿ ಭಾರತಿ ಕಾರ್ಯಕ್ರಮ ನಿರೂಪಿಸಿದರು. ಪ್ರತಿಮಾ ವಂದಿಸಿದರು.