ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2025- 26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಬ್ರಮಣ್ಯ ಜಿ. ಉಪ್ಪುಂದ ಹಾಗೂ ನೂತನ ಕಾರ್ಯದರ್ಶಿಯಾಗಿ ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.ಸುಬ್ರಹ್ಮಣ್ಯ ಜಿ.ಉಪ್ಪುಂದ ಜೆಸಿಐ ಉತ್ತಮ ಸಂಘಟಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.ಇವರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 09 ರಂದು ರೋಟರಿ ಸಮುದಾಯ ಭವನ ಬೈಂದೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.