ಬೈಂದೂರು: ಜನಪರ ಯೋಜನೆ ಮೂಲಕ ರಾಜ್ಯದ ಕಾಂಗ್ರೇಸ್ ಸರಕಾರ ಯಶಸ್ವಿ ಯೋಜನೆಗಳ ಮೂಲಕ ಜನಮನ ತಲುಪಿದೆ.ರಾಜಕೀಯ ಸಹಜ ಆದರೆ ಅಭಿವ್ರದ್ದಿಯಾಗಬೇಕಾದರೆ ಪಕ್ಷ ಬೇದ ಮರೆತು ಸಮನ್ವಯತೆ ಮೂಲಕ ಮುನ್ನೆಡೆಯಬೇಕುಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿದ್ದಿ ಇಲಾಖೆ ಹಾಗೂ ಉಡುಪಿ ಜಿಲ್ಲಾ  ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಹೇಳಿದರು ಅವರು ಜಿಲ್ಲಾಡಳಿತ ಉಡುಪಿ,ಪಟ್ಟಣ ಪಂಚಾಯತ್ ಬೈಂದೂರು ಇದರ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಆವರಣದಲ್ಲಿ ನೂತನವಾಗಿ ಉದ್ಘಾಟನಗೊಂಡ ಇಂದಿರಾ ಕ್ಯಾಂಟಿನ್ ಕಟ್ಟಡವನ್ನು ಉದ್ಘಾಟಿಸಿ ಬಳಿಕ ಬೈಂದೂರು ರೋಟರಿ ಭವನದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಸರಕಾರಿ ಸವಲತ್ತುಗಳನ್ನು ಉದ್ಘಾಟಿಸಿ ಮಾತನಾಡಿ ಯುವಕರ,ಶ್ರಮಿಕರ ಪರವಾದ ಹತ್ತಾರು ಯೋಜನೆ ಸರಕಾರ ರೂಪಿಸಿದೆ. ಅಕ್ರಮ ಸಕ್ರಮ ಸೇರಿದಂತೆ ಹತ್ತಾರು ಜನಪರ ಕಾರ್ಯಕ್ರಮ ಕಾಂಗ್ರೇಸ್ ಪಕ್ಷದ ಕೊಡುಗೆಯಾಗಿದೆ.ಅಧಿಕಾರ ಶಾಶ್ವತವಲ್ಲ ಆದರೆ ಅಧಿಕಾರದಲ್ಲಿದ್ದಾಗ ಮಾಡಿರುವ ಜನಪರ ಕಾರ್ಯ ನಮ್ಮ ಸಾಧನೆಯನ್ನು ಶಾಶ್ವತವಾಗಿರುಸುತ್ತದೆ ಎಂದರು.

ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಬೈಂದೂರು ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣೆ ಮಾಡಲಾಯಿತು.ಉಡುಪಿ ಜಿಲ್ಲೆ ಬುದ್ದಿವಂತರ, ಸಂವೇದನಾ ಶೀಲತೆ ಹೊಂದಿರುವ ಜಿಲ್ಲೆ. ಅಧಿಕಾರಿಗಳು ಉಡುಪಿ ಜಿಲ್ಲೆಗೆ ಕೆಲಸ ಮಾಡಲು ಬರಬೇಕು ಅಂದರೆ ಎರಡು ಮೂರು ಬಾರಿ ಯೋಚನೆ ಮಾಡುತ್ತಾರೆ.ಉಡುಪಿ ಜಿಲ್ಲಾ ಉಸ್ತುವಾರಿ ನನಗೆ ಸಿಕ್ಕಿದ್ದು, ಉಡುಪಿ ಶ್ರೀಕೃಷ್ಣ ನ ಆಶೀರ್ವಾದ ಸಿಕ್ಕಂತಾಯಿತು.ಇದು ನನ್ನ ಸೌಭಾಗ್ಯ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನ ಲ್ಲಿ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದ ಅಂಗನವಾಡಿ ಆರಂಭಗೊಂಡು ಐವತ್ತು ವರ್ಷಗಳಾಯಿತು,ಇಂದಿರಾ ಗಾಂಧಿಯವರು ಶುರು ಮಾಡಿದರು.ಇದೇ ಅಕ್ಟೋಬರ್ ಎರಡನೇ ತಾರೀಖು ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಲಾಗುವುದು ಎಂದರು.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ ಬೈಂದೂರು ಕ್ಷೇತ್ರ ಅತಿ ಹೆಚ್ಚು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ.ಅಕ್ರಮ-ಸಕ್ರಮ ಸಮಸ್ಯೆ ಹನ್ನೆರಡು ಸಾವಿರಕ್ಕೂ ಅಧಿಕ ಅರ್ಜಿಗಳು ಬಾಕಿ ಇದ್ದು ಕುಮ್ಕಿ ಸಮಸ್ಯೆ ಪರಿಹಾರವಾಗಬೇಕಿದೆ.ಪಟ್ಟಣ ಪಂಚಾಯತ್ ವ್ಯಾಪ್ತಿ ಪರಿಷ್ಕರಣೆಯಾಗಬೇಕಿದೆ ಹಲವು ವರ್ಷದಿಂದ ಬಾಕಿ ಉಳಿದ ಬೈಂದೂರು ಬಸ್ ನಿಲ್ದಾಣ,ಅಗ್ನಿಶಾಮಕ ಠಾಣೆ ಉದ್ಘಾಟನೆ ಸೇರಿದಂತೆ ಕೆಲವು ಮಹತ್ವದ ಅಭಿವ್ರದ್ದಿ ಯೋಜನೆಗಳಿಗೆ ಸಚಿವರು ಚಾಲನೆ ನೀಡಬೇಕಿದೆ ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕೊರತೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ.ಎರಡು ಅಕ್ರಮ ಸಕ್ರಮ ಸಮಿತಿ ಇರುವ ಕಾರಣ ಇಪ್ಪತ್ತು ಸಾವಿರಕ್ಕೂ ಅಧಿಕ ಕಡತ ಬಾಕಿ ಇದೆ.ಮಳೆಗಾಲದಲ್ಲಿ ಕರಾವಳಿ ಭಾಗದ ಜನರಿಗೆ ಕಡಲ್ಕೊರೆತ ಖಾಯಂ ಸಮಸ್ಯೆಯಾಗಿದ್ದು ಇದಕ್ಕೆ  ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.ನಾವುಂದ,ಸಾಲ್ಬುಡ ಮುಂತಾದ ಪ್ರದೇಶಗಳಲ್ಲಿ ಹಳ್ಳಗಳ ಹೂಳೆತ್ತುವುದು ಅಗತ್ಯವಾಗಿದೆ.ಬಂದೂರಿನ ಪ್ರವಾಸಿ ಸ್ಥಳವಾದ ಸೋಮೇಶ್ವರದಲ್ಲಿ ಪ್ರವಾಸೋಧ್ಯಮ ಇಲಾಖೆಯಿಂದ ಕಾಮಗಾರಿಗಳು ನಡೆಯುತ್ತಿದ್ದರು ಅದರ ರೂಪುರೇಷಗಳ ಅರಿವು ಇಲ್ಲದಂತಾಗಿದೆ ಇದರ ಬಗ್ಗೆ ಸಚಿವರು ನಿಗಾವಹಿಸಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ,ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ,ಕುಂದಾಪುರ ಸಹಾಯಕ ಆಯುಕ್ತೆ ರಶ್ಮೀ ಆರ್,ಜಿಲ್ಲಾ  ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು,ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮುನಿಯಾಲು,ಬೈಂದೂರು ತಹಶೀಲ್ದಾರ ರಾಮಚಂದ್ರಪ್ಪ,ಮೋಹನ ಪೂಜಾರಿ,ಜಿ.ಪಂ ಮಾಜಿ ಅಧ್ಯಕ್ಷ  ಎಸ್.ರಾಜು ಪೂಜಾರಿ,ನಾಮನಿರ್ದೇಶಿತ ಸದಸ್ಯರಾದ ನಾಗರಾಜ ಶೆಟ್ಟಿ,ಸದಾಶಿವ ಡಿ.ಪಡುವರಿ,ನಾಗರಾಜ ಗಾಣಿಗ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಲಾಯಿತು.ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಮಾನ್ಯ ಇವರನ್ನು ಸಮ್ಮಾನಿಸಲಾಯಿತು.

ಕುಂದಾಪುರ ತಹಶೀಲ್ದಾರ ಪ್ರದೀಪ ಕುರ್ಡೆಕರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ ಭಂಡಾರ್ಕರ್ ಸ್ವಾಗತಿಸಿದರು.ಶಿಕ್ಷಕ ಸುಧಾಕರ ಪಿ.ಬೈಂದೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವರದಿ/ಚಿತ್ರ: ಗಿರಿ ಶಿರೂರು

 

Leave a Reply

Your email address will not be published. Required fields are marked *

three × three =

You missed