ಬೈಂದೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು ಅವರು ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ.ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಬೇಕು, ನಾನು ಕೂಡ ಬೂತ್ ಏಜೆಂಟ್, ಕೌಟಿಂಗ್ ಏಜೆಂಟ್ ಆಗಿ ಕೆಲಸ ಮಾಡಿರುವೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದನ್ನು ಗುರುತಿಸಿ ಟಿಕೆಟ್ ನೀಡಲಾಯಿತು. ಇದೀಗ ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬಳೇ ಮಹಿಳಾ ಮಂತ್ರಿಯಾಗಿರುವೆ. ನನಗೆ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿದೆ.ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರು ಕಳೆದ ಚುನಾವಣೆಯಲ್ಲಿ ಸೋತರೂ ಕಾರ್ಯಕರ್ತರ, ಕ್ಷೇತ್ರದ ಒಡನಾಟ ಬಿಟ್ಟಿಲ್ಲ. ಜನರ ಕಷ್ಟ ಸುಖದ ಬಗ್ಗೆ ಸದಾ ಯೋಚನೆ ಮಾಡುತ್ತಾರೆ ಎಂದರು.
ನಿಕಟ ಪೂರ್ವ ಅಧ್ಯಕ್ಷ ಶೇಖರ್ ಪೂಜಾರಿ ಅವರು ನೂತನ ಅಧ್ಯಕ್ಷರಾದ ಭರತ್ ದೇವಾಡಿಗ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಅಶೋಕ್ ಕೊಡವೂರು, ಉದಯ್ ಕುಮಾರ್ ಶೆಟ್ಟಿ, ಮುಖಂಡರಾದ ರಾಜು ಪೂಜಾರಿ, ಕಿಶನ್ ಹೆಗ್ಡೆ, ರಘುರಾಮ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಪೂಜಾರಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.