ಶಿರೂರು: ಅಭಿವೃದ್ದಿ ಸಂಸ್ಥೆ(ರಿ.) ಬಾಳ್ಕುದ್ರು ಹಂಗಾರಕಟ್ಟೆ,ಗ್ರಾಮ ಪಂಚಾಯತ್ ಶಿರೂರು,ಸ.ಪ.ಪೂ ಕಾಲೇಜು ಫ್ರೌಢಶಾಲಾ ವಿಭಾಗ ಶಿರೂರು ಹಾಗೂ ಕಾಲೇಜು ಮತ್ತು ಮೇಲುಸ್ತುವಾರಿ ಸಮಿತಿ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಶಿಬಿರ ಕಾರ್ಯಕ್ರಮ ಶಿರೂರು ಸ.ಪ.ಪೂ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗರತ್ನ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದಿನ ಸಾಮಾಜಿಕ ಸ್ಥಿತ್ಯಂತರ ಕಾಲಘಟ್ಟದಲ್ಲಿ ಸಮಾಜದಲ್ಲಿ ಅನೇಕ ಬದಲಾವಣೆಗಳು ನಮ್ಮ ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಉಂಟು ಮಾಡುತ್ತಿದೆ.ಅದರಲ್ಲಿ ಮುಖ್ಯವಾಗಿ ಯುವ ಜನತೆ ದಾರಿ ತಪ್ಪುತ್ತಿದ್ದಾರೆ. ಮುಖ್ಯವಾಗಿ ಕೆಲವು ದುಷ್ಚಟದಿಂದ ಬಳಲುತ್ತಿದ್ದು ನಾವೆಲ್ಲರೂ ಅದನ್ನು ಪ್ರತಿರೋಽಸಬೇಕಾಗಿದೆ ಎಂದರು.
ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಹಮ್ಮದ್ ಗೌಸ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ,ಸಂಪನ್ಮೂಲ ವ್ಯಕ್ತಿ ಮಂಜುನಾಥ ಡಿ.ಕೆ, ಉಪಸ್ಥಿತರಿದ್ದರು.
ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಬಾಳ್ಕುದ್ರು ರಮೇಶ ವಕ್ವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಫ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜಯಂತಿ ಶೆಟ್ಟಿ ಸ್ವಾಗತಿಸಿದರು.ಅನಿಷ ಬ್ರಹ್ಮಾವರ ಕಾರ್ಯಕ್ರಮ ನಿರೂಪಿಸಿದರು.